HomeKarnatakaರೇಷನ್ ಕಾರ್ಡ್ ಗೆ ಇ- ಕೆವೈಸಿ ಮಾಡಿಸದವರಿಗೆ ಶಾಕ್: ಲಕ್ಷಾಂತರ ಪಡಿತರ ಚೀಟಿ ರದ್ದು: ರೇಷನ್,...

ರೇಷನ್ ಕಾರ್ಡ್ ಗೆ ಇ- ಕೆವೈಸಿ ಮಾಡಿಸದವರಿಗೆ ಶಾಕ್: ಲಕ್ಷಾಂತರ ಪಡಿತರ ಚೀಟಿ ರದ್ದು: ರೇಷನ್, ಗೃಹಲಕ್ಷ್ಮಿ ಇತರೆ ಸೌಲಭ್ಯ ಸ್ಥಗಿತ

ಬೆಂಗಳೂರು: ರಾಜ್ಯದಲ್ಲಿ ಅನರ್ಹರ 22 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಿದ ಆಹಾರ ಇಲಾಖೆ ಆಧಾರ್ ದೃಢೀಕರಣ ಮಾಡದ ಕಾರಣಕ್ಕೆ ಲಕ್ಷಾಂತರ ಎಪಿಎಲ್ ಕಾರ್ಡುಗಳನ್ನು ಕೂಡ ರದ್ದು ಮಾಡಿದೆ.

ಎಪಿಎಲ್ ಕಾರ್ಡ್ ಗಳಿಗೆ ನೀಡಲಾಗುತ್ತಿದ್ದ ರೇಷನ್ ಹಂಚಿಕೆಯನ್ನು ನಿಲ್ಲಿಸಲಾಗಿದೆ. ಇದರಿಂದಾಗಿ ಆಯುಷ್, ವಿಮೆ, ಗೃಹಲಕ್ಷ್ಮಿ ಹಣ ಸೇರಿ ಹಲವು ಸೌಲಭ್ಯ ಪಡೆಯುತ್ತಿದ್ದ ಎಪಿಎಲ್ ಕಾರ್ಡ್ ದಾರರಿಗೆ ತೊಂದರೆಯಾಗಿದೆ.

ರಾಜ್ಯದ್ಯಂತ ರೇಷನ್ ಕಾರ್ಡ್ ಪರಿಶೀಲನೆ ಕಾರ್ಯ ಕೈಗೊಂಡ ಆಹಾರ ಇಲಾಖೆ ಇ- ಕೆವೈಸಿ ಮಾಡಿಸಲು ಸೂಚನೆ ನೀಡಿತ್ತು. ಈ ವೇಳೆ ಲಕ್ಷಾಂತರ ಬೋಗಸ್ ಕಾರ್ಡ್ ಗಳು ಪತ್ತೆಯಾಗಿದ್ದು, ಅಂತಹ ಕಾರ್ಡುಗಳನ್ನು ರದ್ದು ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಪಿಎಲ್ ಕಾರ್ಡ್ ರದ್ದಾಗಿದ್ದರಿಂದ ಗೃಹಲಕ್ಷ್ಮಿ ಯೋಜನೆಯಡಿ ಪಡೆಯುತ್ತಿದ್ದ ಹಣ ಸ್ಥಗಿತವಾಗಿದೆ. ಸರ್ಕಾರಿ ಕೆಲಸಗಳಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ವಿವಿಧ ಸರ್ಕಾರಿ ಸೌಲಭ್ಯಗಳು ಸಿಗುವುದಿಲ್ಲ. ಆಯುಷ್ಮಾನ್ ಭಾರತ್ ಯೋಜನೆ ಲಾಭ ಪಡೆಯಲು, ರಿಯಾಯಿತಿ ದರದಲ್ಲಿ ಅಕ್ಕಿ ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಹೀಗೆ ಅನೇಕ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular