‘ಬಿಜೆಪಿ’ ಜಾರಿಗೆ ತಂದಿದ್ದ ಎಪಿಎಂಸಿ ಕಾಯ್ದೆ ರದ್ದು: ತಿದ್ದುಪಡಿಯೊಂದಿಗೆ ಹಳೆ ಕಾಯ್ದೆ ಮರು ಜಾರಿ

ಬೆಂಗಳೂರು: ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆದು ಇಡೀ ದೇಶಕ್ಕೆ ಮಾದರಿಯಾಗಿದ್ದ ಕರ್ನಾಟಕ ಎಪಿಎಂಸಿ ಮೂಲಕ ಕಾಯ್ದೆಯನ್ನು ಮತ್ತಷ್ಟು ಸುಧಾರಣೆಗಳೊಂದಿಗೆ ಮರು ಜಾರಿಗೊಳಿಸಲು ಸರ್ಕಾರ ಮುಂದಾಗಿದೆ.

ಜುಲೈ 3 ರಿಂದ ಆರಂಭವಾಗುವ ವಿಧಾನಮಂಡಲ ಅಧಿವೇಶನದಲ್ಲಿ ಸುಧಾರಿತ ಎಪಿಎಂಸಿ ಮಸೂದೆ ಮಂಡಿಸಲಾಗುವುದು. ಜವಳಿ ಮತ್ತು ಎಪಿಎಂಸಿ ಸಚಿವ ಶಿವಾನಂದ ಪಾಟೀಲ್, ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಅವರು ಉನ್ನತ ಮಟ್ಟದ ಸಭೆ ನಡೆಸಿದ್ದು, ಈ ಸಭೆಯಲ್ಲಿ ಸುಧಾರಿತ ಎಪಿಎಂಸಿ ಕಾಯ್ದೆ ಜಾರಿಗೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಚರ್ಚೆ ನಡೆಸಲಾಗಿದೆ.

ಹಾಲಿ ಎಪಿಎಂಸಿ ತಿದ್ದುಪಡಿ ಕಾಯ್ದೆ ರದ್ದುಪಡಿಸಿ ಮೂಲ ಎಪಿಎಂಸಿ ಕಾಯ್ದೆಯನ್ನು ಸುಧಾರಿತ ಸ್ವರೂಪದಲ್ಲಿ ಜಾರಿಗೊಳಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಈ ಹಿಂದೆ ಕೇಂದ್ರ ಸರ್ಕಾರ ನಾಲ್ಕು ವಿವಾದಿತ ಕೃಷಿ ಕಾಯ್ದೆ ಹಿಂಪಡೆದರೂ ರಾಜ್ಯದಲ್ಲಿ ಬಿಜೆಪಿ ಎಪಿಎಂಸಿಗೆ ಸಂಬಂಧಿಸಿದ ತಿದ್ದುಪಡಿ ಕಾಯ್ದೆ ಹಿಂಪಡೆದುಕೊಂಡಿರಲಿಲ್ಲ.

ಈಗ ಕಾಂಗ್ರೆಸ್ ಸರ್ಕಾರ ಈ ಕಾಯ್ದೆಗೆ ಇನ್ನಷ್ಟು ಸುಧಾರಿತ ಅಂಶಗಳನ್ನು ಸೇರಿಸಿ ಅಧಿವೇಶನದಲ್ಲಿ ಹೊಸ ವಿಧೇಯಕ ಮಂಡಿಸಲಿದೆ. ಎಪಿಎಂಸಿ ಕಾಯ್ದೆಯ ಮೂಲ ಸ್ವರೂಪ ಉಳಿಸಿಕೊಳ್ಳುವುದರೊಂದಿಗೆ ರೈತರ ಹಿತರಕ್ಷಣೆ ದೃಷ್ಟಿಯಿಂದ ಅಗತ್ಯ ಸುಧಾರಿತ ಪ್ರಸ್ತಾಪ ಒಳಗೊಂಡ ವಿಧೇಯಕ ಮಂಡಿಸುವುದಾಗಿ ಸಚಿವ ಹೆಚ್.ಕೆ. ಪಾಟೀಲ್, ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read