HomeKarnatakaಎಪಿಎಂಸಿಯಲ್ಲಿಯೇ ಚಾಲಕ ಆತ್ಮಹತ್ಯೆ

ಎಪಿಎಂಸಿಯಲ್ಲಿಯೇ ಚಾಲಕ ಆತ್ಮಹತ್ಯೆ

ಚಿತ್ರದುರ್ಗ: ಎಪಿಎಂಸಿಯ ಆಡಳಿತ ಕಚೇರಿಯ ಮುಂಭಾಗದಲ್ಲಿಯೇ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ನಡೆದಿದೆ.

ಎಪಿಎಂಸಿ ಕಾರ್ಯದರ್ಶಿಯ ವಾಹನ ಚಾಲಕ ಜಗದೀಶ್ ಆತ್ಮಹತ್ಯೆಗೆ ಶರಣಾದವರು. ಕೆಲವು ವರ್ಷಗಳಿಂದ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ಜಗದೀಶ್ ಈಗ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆಡಳಿತ ಕಚೇರಿ ಕಟ್ಟಡದ ಮುಂಭಾಗದಲ್ಲಿಯೇ ನೇಣಿಗೆ ಕೊರಳೊಡ್ಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹೊಸದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular