HomeKarnatakaತಮಿಳುನಾಡಿಗೆ ಕಾವೇರಿ ನೀರು ಆದೇಶದ ವಿರುದ್ಧ ಮೇಲ್ಮನವಿ, ಜು. 14 ರಂದು ಸರ್ವಪಕ್ಷ ಸಭೆ: ಸಿಎಂ

ತಮಿಳುನಾಡಿಗೆ ಕಾವೇರಿ ನೀರು ಆದೇಶದ ವಿರುದ್ಧ ಮೇಲ್ಮನವಿ, ಜು. 14 ರಂದು ಸರ್ವಪಕ್ಷ ಸಭೆ: ಸಿಎಂ

ಬೆಂಗಳೂರು: ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು ಹಾಗೂ ರಾಜ್ಯದ ಮುಂದಿನ ನಡೆ ಏನು ಎಂಬ ಕುರಿತು ಜುಲೈ 14 ರಂದು ಸರ್ವಪಕ್ಷ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಗೃಹಕಚೇರಿ ಕೃಷ್ಣಾದಲ್ಲಿ ಇಂದು ಕಾವೇರಿ ನೀರು ನಿಯಂತ್ರಣ ಸಮಿತಿಯು ನೀರು ಬಿಡುವಂತೆ ನೀಡಿರುವ ಆದೇಶದ ಕುರಿತು ಸಂಪುಟ ಸಹೋದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸುದೀರ್ಘ ಚರ್ಚೆ ನಡೆಸಿ, ನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಈ ಬಾರಿ ವಾಡಿಕೆ ಮಳೆ ಆಗುವುದೆಂಬ ಹವಾಮಾನ ಮುನ್ಸೂಚನೆ ಇದ್ದರೂ ಈ ವರೆಗೆ ಶೇ. 28 ರಷ್ಟು ಒಳಹರಿವಿನ ಕೊರತೆ ಇದೆ ಎಂದು ಸಿ.ಡಬ್ಲ್ಯೂ.ಆರ್.ಸಿ. ಗೆ ಸ್ಪಷ್ಟವಾಗಿ ನಮ್ಮ ನಿಲುವನ್ನು ಹೇಳಿದ್ದೆವು. ಜೊತೆಗೆ ಜುಲೈ ಅಂತ್ಯದ ವರೆಗೆ ಯಾವುದೇ ತೀರ್ಮಾನ ಮಾಡದಂತೆ ಮನವಿ ಮಾಡಿದ್ದೆವು. ಆದರೂ ಸಿ.ಡಬ್ಲ್ಯೂ.ಆರ್.ಸಿ ಅವರು ಜುಲೈ 12 ರಿಂದ ಪ್ರತಿ ದಿನ ಒಂದು ಟಿಎಂಸಿ ನೀರು ಬಿಡುಗಡೆ ಮಾಡುವಂತೆ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರ ಈ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಬೇಕೆಂಬ ಅಭಿಪ್ರಾಯ ಇಂದಿನ ಸಭೆಯಲ್ಲಿ ವ್ಯಕ್ತವಾಗಿದೆ. ಜೊತೆಗೆ ಜುಲೈ 14 ರಂದು ಸಂಜೆ 4 ಗಂಟೆಗೆ ಸರ್ವಪಕ್ಷ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಕರ್ನಾಟಕದ ನೀರಿನ ವಿಚಾರದಲ್ಲಿ ಎಲ್ಲ ಪಕ್ಷದವರೂ ಒಟ್ಟಾಗಿದ್ದೇವೆ. ಆದ್ದರಿಂದ ಸರ್ವಪಕ್ಷ ಸಭೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಕೇಂದ್ರ ಮಂತ್ರಿಗಳು, ಕಾವೇರಿ ಭಾಗದ ಲೋಕಸಭೆ, ರಾಜ್ಯಸಭೆ ಸದಸ್ಯರು ಮತ್ತು ಶಾಸಕರನ್ನು ಸಹ ಸಭೆಗೆ ಆಹ್ವಾನಿಸಲಾಗುವುದು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರದ ಮುಂದಿನ ಹೆಜ್ಜೆಯ ಬಗ್ಗೆ ತೀರ್ಮಾನಿಸಲಾಗುವುದು ಎಂದರು.

ಕಾವೇರಿ ಜಲಾನಯನ ಪ್ರದೇಶದ ಎಲ್ಲಾ 4 ಜಲಾಶಯಗಳಲ್ಲಿ ಒಟ್ಟು ಕೇವಲ 60 ಟಿಎಂಸಿ ನೀರು ಲಭ್ಯವಿದೆ. ಕೃಷಿ ಚಟುವಟಿಕೆಗಳಿಗೂ ನಾವು ನೀರು ಒದಗಿಸಬೇಕಾಗಿದೆ. ಮಳೆ ಕೊರತೆಯನ್ನು ಗಮನದಲ್ಲಿರಿಸಿ ಜುಲೈ ಅoತ್ಯದವರೆಗೆ ಕಾಯಲು ಮನವಿ ಮಾಡಿದ್ದೇವೆ. ಆದರೆ ತೀರ್ಪಿನಲ್ಲಿ ನಮ್ಮ ಮನವಿ ಪರಿಗಣಿಸಿದಂತೆ ಕಾಣುತ್ತಿಲ್ಲ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular