HomeKarnatakaBREAKING: ಸೇಬು ಹಣ್ಣು ಸಾಗಿಸುತ್ತಿದ್ದ ಗೂಡ್ಸ್ ವಾಹನ ಪಲ್ಟಿ: ಲಕ್ಷಾಂತರ ಮೌಲ್ಯದ ಹಣ್ಣುಗಳು ರಸ್ತೆಪಾಲು

BREAKING: ಸೇಬು ಹಣ್ಣು ಸಾಗಿಸುತ್ತಿದ್ದ ಗೂಡ್ಸ್ ವಾಹನ ಪಲ್ಟಿ: ಲಕ್ಷಾಂತರ ಮೌಲ್ಯದ ಹಣ್ಣುಗಳು ರಸ್ತೆಪಾಲು

ಬೆಳಗಾವಿ: ಸೇಬು ಹಣ್ಣು ಸಾಗಿಸುತ್ತಿದ್ದ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದ ಘಟನೆ ಬೆಳಗಾವಿ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮುಂಬೈನಿಂದ ದಾವಣಗೆರೆ ಜಿಲೆಗೆ ಗೂಡ್ಸ್ ವಾಹನದಲ್ಲಿ ಸೇಬು ಸಾಗಿಸಲಾಗುತ್ತಿತ್ತು. ಈ ವೇಳೆ ನಿಯಂತ್ರಣ ತಪ್ಪಿದ ಗೂದ್ಸ್ ವಾಹನ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿ ಬಿದ್ದಿದೆ. ಸೇಬು ಹಣ್ಣಿನ ಬಾಕ್ಸ್ ಗಳು ರಸ್ತೆ ಪಾಲಾಗಿದ್ದು, ರಸ್ತೆ ತುಂಬೆಲ್ಲ ಸೇಬು ಚಲ್ಲಾಪಿಲ್ಲಿಯಾಗಿ ಬಿದ್ದಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲಕ್ಷ ಲಕ್ಷ ಮೌಲ್ಯದ ಸೇಬು ಹಣ್ಣುಗಳು ರಸ್ತೆಪಾಲಾಗಿವೆ. ಅಪಘಾತದಲ್ಲಿ ಗೂಡ್ಸ್ ವಾಹನ ಚಾಲಕನಿಗೆ ಗಾಯಗಳಾಗಿವೆ. ವಾಹನ ಪಲ್ಟಿಯಾಗಿದ್ದರಿಂದ ಕೆಲ ಕಾಲ ಟ್ರಾಫಿಕ್ ಜಾಮ್ ಸಂಭವಿಸಿದೆ. ಘಟನಾ ಸ್ಥಳಕ್ಕೆ ಬೆಳಗಾವಿ ಉತ್ತರ ಸಖ್ಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular