ಎಸ್ಎಸ್ಎಲ್ಸಿ, ಐಟಿಐ ಪಾಸಾದವರಿಗೆ ಹೆಚ್.ಎ.ಎಲ್.ನಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ

ಹೆಚ್.ಎ.ಎಲ್.(ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್) ನಲ್ಲಿ ವಿವಿಧ ಟ್ರೇಡ್‍ಗಳ ಅಪ್ರೆಂಟಿಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಫಿಟ್ಟರ್, ಟರ್ನರ್, ಎಲೆಕ್ಟ್ರಿಷಿಯನ್, ವೆಲ್ಡರ್, ಕಂಪ್ಯೂಟರ್ ಆಪರೇಟರ್ ಅಂಡ್ ಫ್ರೋಗ್ರಾಮ್ ಅಸಿಸ್ಟಂಟ್, ಕಾರ್ಪೆಂಟರ್, ಫೌಂಡ್ರಿ-ಮ್ಯಾನ್, ಶೀಟ್ ಮೆಟಲ್ ವರ್ಕರ್, ಟೂಲ್ ಮತ್ತು ಡೈ ಮಾರ್ಕರ್, ಸಿ.ಎನ್.ಜಿ. ಫ್ರೋಗ್ರಾಮರ್ ಕಂ ಆಪರೇಟರ್ ಟ್ರೇಡಗಳಿಗೆ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಿದೆ.

ಅಪ್ರೆಂಟಿಸ್ ತರಬೇತಿಯು ಒಂದು ವರ್ಷ ಅವಧಿಯದ್ದಾಗಿದೆ. ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣಗೊಂಡು, ಸಂಬಂಧಪಟ್ಟ ಟ್ರೇಡ್‍ಗಳಲ್ಲಿ ಐ.ಟಿ.ಐ ತರಬೇತಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿಗೆ ವೆಬ್‍ಸೈಟ್ www.apprenticeshipindia.gov.in ಅಥವಾ www.halindia.com/career ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ನೊಂದಾಯಿಸಬಹುದು. ಅರ್ಜಿ ಸಲ್ಲಿಕೆಗೆ ಅ.10 ಕೊನೆಯ ದಿನವಾಗಿದೆ.

ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಐ.ಟಿ.ಐ ಪ್ರಮಾಣ ಪತ್ರ ಅಥವಾ ಸ್ವ-ದೃಢೀಕೃತ ರಿಸಲ್ಟ್ ಶೀಟ್, ಜಾತಿ ಮತ್ತು ಆದಾಯ, ಅಂಗವಿಕಲರ, ಆರ್ಮಡ್ ಪರ್ಸನಲ್ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಜೆರಾಕ್ಸ್, ಅಭ್ಯರ್ಥಿಯ 4 ಭಾವಚಿತ್ರಗಳು ಹಾಗೂ ಎನ್‍ಸಿವಿಟಿ ಎಮ್‍ಐಎಸ್ ತಂತ್ರಾಂಶದಲ್ಲಿ ನೋಂದಣಿಯಾದ ಕುರಿತ ವಿವರಗಳನ್ನು ಅರ್ಜಿ ಸಲ್ಲಿಸುವಾಗ ಭರ್ತಿಮಾಡಬೇಕು.

ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ಸಲ್ಲಿಸಲು ನೋಂದಾಯಿಸಿಕೊಳ್ಳಲು ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಭೇಟಿ ನೀಡಬಹುದು. ದೂರವಾಣಿ ಸಂಖ್ಯೆ 9945587060, 7022459064, 7019755147 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read