ಲ್ಯಾಟರಲ್ ಎಂಟ್ರಿ ಸ್ಕೀಂ ಮೂಲಕ ಡಿಪ್ಲೊಮಾ ಕೋರ್ಸ್ ಗೆ ಅರ್ಜಿ

ಶಿವಮೊಗ್ಗ: ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ/3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸ್‍ಗಳಿಗೆ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ,

2 ವರ್ಷಗಳ ಐಟಿಐ/ದ್ವಿತೀಯ ಪಿಯುಸಿ(ವಿಜ್ಞಾನ/ದ್ವಿತೀಯ ಪಿಯುಸಿ(ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಗೆ ಸರ್ಕಾರಿ ಪಾಲಿಟೆಕ್ನಿಕ್‍ಗಳಲ್ಲಿ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ/3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸ್‍ಗಳಿಗೆ ಪ್ರವೇಶ ಸೀಟುಗಳನ್ನು ಭರ್ತಿ ಮಾಡಲು ಪ್ರಾಂಶುಪಾಲರ ಹಂತದಲ್ಲಿಯೇ ಮೆರಿಟ್ ಆಧಾರಿತವಾಗಿ ಆಫ್‍ಲೈನ್ ಮೂಲಕ ಜೂ. 10 ರಿಂದ 25 ರವರೆಗೆ ಅರ್ಜಿ ಸ್ವೀಕರಿಸಲಾಗುವುದು. ಜೂ. 27ರಿಂದ 28ರವರೆಗೆ ಸೀಟು ಹಂಚಿಕೆ ಮಾಡಲಾಗುವುದು.

ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟಿಸ್(ಕನ್ನಡ), ಕಮರ್ಷಿಯಲ್ ಪ್ರಾಕ್ಟಿಸ್(ಇಂಗ್ಲೀಷ್), ಆಪರೇಲ್ ಡಿಸೈನ್ & ಫ್ಯಾಬ್ರಿಕೇಷನ್ ಟೆಕ್ನಾಲಜಿ ಕೋರ್ಸುಗಳು ಲಭ್ಯವಿದೆ.

ಆಸಕ್ತ ಅಭ್ಯರ್ಥಿಗಳು ಐಟಿಐ/ಪಿಯುಸಿ ಪರೀಕ್ಷೆಯಲ್ಲಿ ಶೇ.35 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಮೂಲ ವರ್ಗಾವಣೆ ಪ್ರಮಾಣ ಪತ್ರ/ಎನ್‍ಓಸಿ, 5 ವರ್ಷದ ವ್ಯಾಸಂಗ ಪ್ರಮಾಣ ಪತ್ರ, ಜಾತಿ ಮತ್ತು ಆಧಾರ್, 4 ಭಾವಚಿತ್ರಗಳನ್ನು ಸಲ್ಲಿಸಬೇಕು. ಜೂನ್ 25 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದ್ದು, ಹೆಚ್ಚಿನ ವಿವರಗಳಿಗೆ ಪ್ರಾಂಶುಪಾಲರು ಮೊ.ಸಂ: 9886610245 ನ್ನು ಸಂಪರ್ಕಿಸಬಹುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read