ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ KEA ಅರ್ಜಿ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ರಾಯಚೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ 6 ಹಾಗೂ ಕಲ್ಯಾಣ ಕರ್ನಾಟಕ ವೃಂದದ 18 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ರಸಾಯನಶಾಸ್ತ್ರ, ಅರ್ಥಶಾಸ್ತ್ರ, ಇಂಗ್ಲಿಷ್, ಇತಿಹಾಸ, ಗಣಿತ, ಭೌತಶಾಸ್ತ್ರ, ಸಮಾಜಶಾಸ್ತ್ರ ಸೇರಿದಂತೆ ವಿವಿಧ ವಿಷಯಗಳ ಅಭ್ಯರ್ಥಿಗಳು ಶೇಕಡ 55 ಅಂಕದೊಂದಿಗೆ ಸ್ನಾತಕೋತ್ತರ ಪದವಿ ಪಡೆದಿರಬೇಕು. ಅಂಗವಿಕಲ ಅಭ್ಯರ್ಥಿಗಳು ಶೇಕಡ 50 ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಪಾಸಾಗಿರಬೇಕು.

ನೆಟ್, ಕೆ-ಸೆಟ್ ಪಾಸಾಗಿರಬೇಕು. ಪಿ.ಹೆಚ್.ಡಿ., ಎಂಫಿಲ್ ಪದವಿ ಪಡೆದವರಿಗೆ ನೆಟ್, ಕೆ-ಸೆಟ್ ಪರೀಕ್ಷೆಯಿಂದ ವಿನಾಯಿತಿ ನೀಡಲಾಗುವುದು. ಅರ್ಜಿ ಸಲ್ಲಿಕೆಯ ಕೊನೆ ದಿನಾಂಕದಂದು ಕನಿಷ್ಠ 22 ವರ್ಷಗಳು ಪೂರ್ಣಗೊಂಡಿರಬೇಕು. ಗರಿಷ್ಠ ವಯೋಮಿತಿ ನಿಗದಿಪಡಿಸಿಲ್ಲ. ಅರ್ಜಿ ಸಲ್ಲಿಕೆ ಮತ್ತು ವಿವರಗಳಿಗಾಗಿ ಕೆಇಎ ವೆಬ್ ಸೈಟ್ http://kea.kar.nic.in ಗಮನಿಸಬಹುದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read