ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಏಳು ಮಂದಿ ಆರೋಪಿಗಳ ಸ್ಥಳಾಂತರ ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.
ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ಪ್ರಾಸಿಕ್ಯೂಷನ್ ಪರ ಅಭಿಯೋಜಕರು ಅರ್ಜಿ ಸಲ್ಲಿಸಿದ್ದಾರೆ.ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ರದ್ದುಪಡಿಸಿದ ಹಿನ್ನೆಲೆಯಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಸೇರಿದ್ದಾರೆ.
ಈ ಹಿಂದೆ ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿದ ಹಿನ್ನೆಲೆ ನಟ ದರ್ಶನ್ ಸೇರಿ 7 ಮಂದಿ ಆರೋಪಿಗಳ ಸ್ಥಳಾಂತರಕ್ಕೆ ಕೋರ್ಟ್ ಗೆ ಮನವಿ ಮಾಡಲಾಗಿದೆ.ನಟ ದರ್ಶನ್ ಸೇರಿದಂತೆ ಏಳು ಆರೋಪಿಗಳನ್ನು ಬೇರೆ ಬೇರೆ ಜೈಲಿಗೆ ಕಳುಹಿಸಲು ಮನವಿ ಮಾಡಲಾಗಿದೆ. ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗುವ ಸಾಧ್ಯತೆಯಿದೆ.
TAGGED:ದರ್ಶನ್
