HomeKarnatakaಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಡಿಪ್ಲೊಮಾ ಕೋರ್ಸ್‌ ಗಳ ಪ್ರವೇಶಾತಿಗೆ ಅರ್ಜಿ

ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಡಿಪ್ಲೊಮಾ ಕೋರ್ಸ್‌ ಗಳ ಪ್ರವೇಶಾತಿಗೆ ಅರ್ಜಿ

ಶಿವಮೊಗ್ಗ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವು (ಜಿಟಿಟಿಸಿ) 2026-27ನೇ ಶೈಕ್ಷಣಿಕ ಸಾಲಿನ ವಿವಿಧ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಲಭ್ಯವಿರುವ ಕೋರ್ಸ್‌ಗಳು:

ಡಿಪ್ಲೊಮಾ ಇನ್ ಟೂಲ್ & ಡೈ ಮೇಕಿಂಗ್,

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿಪ್ಲೊಮಾ ಇನ್ ಮೆಕಾಟ್ರಾನಿಕ್ಸ್,

ಡಿಪ್ಲೊಮಾ ಇನ್ ಪ್ರಿಸಿಸನ್ ಮ್ಯಾನುಫ್ಯಾಕ್ಚರಿಂಗ್.

ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ ಪಾಸಾಗಿರಬೇಕು. ಮೂರು ವರ್ಷದ ತರಬೇತಿ + ಒಂದು ವರ್ಷದ ಕಡ್ಡಾಯ ಕೈಗಾರಿಕಾ ತರಬೇತಿ ಆಗಿರಬೇಕು.

ಪ್ರತಿ ಕೋರ್ಸ್‌ಗೆ 60 ಸೀಟುಗಳು ಲಭ್ಯವಿದ್ದು, ಐಟಿಐ ಅಥವಾ ಪಿಯುಸಿ (ವಿಜ್ಞಾನ) ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಎರಡನೇ ವರ್ಷದ ಡಿಪ್ಲೊಮಾಗೆ ನೇರ ಪ್ರವೇಶದ ಅವಕಾಶವಿದೆ.

ಮೀಸಲಾತಿ: ಮೆರಿಟ್ ಮತ್ತು ರೋಸ್ಟರ್ ಪದ್ಧತಿಯಂತೆ ಸೀಟು ಹಂಚಿಕೆ ನಡೆಯಲಿದ್ದು, ಶೇಕಡಾ 30 ರಷ್ಟು ಸೀಟುಗಳನ್ನು ವಿದ್ಯಾರ್ಥಿನಿಯರಿಗಾಗಿ ಕಾಯ್ದಿರಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10/05/2026 ಆಗಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು https://gttc-hrms.karnataka.gov.in/Admissions ಜಾಲತಾಣಕ್ಕೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಮೊಬೈಲ್ ಸಂಖ್ಯೆ 9448307027, 9880141054, 9449286543‌ ಸಂಪರ್ಕಿಸಬಹುದೆಂದು ಜಿಟಿಟಿಸಿ ಪ್ರಾಂಶುಪಾಲರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular