GOOD NEWS : ಮೀನುಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಶಿವಮೊಗ್ಗ :  ಮೀನುಗಾರಿಕೆ ಇಲಾಖೆಯು 2023-24ನೇ ಸಾಲಿನಲ್ಲಿ ಮೀನುಗಾರಿಕೆ ಸಲಕರಣೆ ಕಿಟ್ಟು/ ಫೈಬರ್ ಗ್ಲಾಸ್ ಹರಿಗೋಲು ವಿತರಣೆ, ಮೀನುಮರಿ ಖರೀದಿಗೆ ಸಹಾಯಧನ, ಕೆರೆ/ಜಲಾಶಯ ಅಂಚಿನಲ್ಲಿ ನಿರ್ಮಿಸಿರುವ ಕೊಳಗಳಲ್ಲಿ ಮೀನುಮರಿ ಪಾಲನೆಗೆ ಸಹಾಯ ಇತ್ಯಾದಿ ಯೋಜನೆಗಳಡಿ ಆಸಕ್ತ ಒಳನಾಡು ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಸಂಬಂಧಪಟ್ಟ ತಾಲೂಕು ಮಟ್ಟದ ಕಚೇರಿಗಳನ್ನು ಸಂಪರ್ಕಿಸಿ ಸೇವಾಸಿಂಧು ಪೊರ್ಟಲ್ ಮೂಲಕ ಅರ್ಜಿಗಳನ್ನು ಆಗಸ್ಟ್-19 ರೊಳಗಾಗಿ ಸಲ್ಲಿಸುವಂತೆ ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‍ಸೈಟ್ www.fisheries.karnatakal.gov.in ರಲ್ಲಿ ಹಾಗೂ ಶಿವಮೊಗ್ಗ-9986040981, ಭದ್ರಾವತಿ-9743370815, ಶಿಕಾರಿಪುರ -9535386449, ಸಾಗರ ಮತ್ತು ಸೊರಬ-9483028730, ತೀರ್ಥಹಳ್ಳಿ-7411174772 ತಾಲೂಕು ಮೀನುಗಾರಿಗೆ ಸಹಾಯಕ ನಿರ್ದೇಶಕರುಗಳನ್ನು ಸಂಪರ್ಕಿಸುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read