HomeLatest Newsಮದುವೆಯಾಗಲು ಆಸಕ್ತರಿಗೆ ಗುಡ್ ನ್ಯೂಸ್: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹಕ್ಕೆ ಅರ್ಜಿ: 2ನೇ ವಿವಾಹಕ್ಕೆ...

ಮದುವೆಯಾಗಲು ಆಸಕ್ತರಿಗೆ ಗುಡ್ ನ್ಯೂಸ್: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹಕ್ಕೆ ಅರ್ಜಿ: 2ನೇ ವಿವಾಹಕ್ಕೆ ಅವಕಾಶವಿಲ್ಲ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 2026ರ ಏಪ್ರಿಲ್ 29ರಂದು ಸಂಜೆ 6:40ಕ್ಕೆ ಗೋಧೂಳಿ ಮುಹೂರ್ತದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಹಮ್ಮಿಕೊಳ್ಳಲಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಎರಡನೇ ಮದುವೆಗೆ ಅವಕಾಶವಿಲ್ಲ. ವಧುವಿಗೆ ಸೀರೆ, ರವಿಕೆ ಕಣ, ಮಂಗಳಸೂತ್ರ, ಹೂವಿನ ಹಾರ, ವರನಿಗೆ ಧೋತಿ, ಶಾಲು ನೀಡಲಾಗುವುದು. ಮದುವೆಯ ಸಂಪೂರ್ಣ ವೆಚ್ಚವನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗಡೆ ಅಧ್ಯಕ್ಷತೆಯ ಧರ್ಮಸ್ಥಳ ಮಂಜುನಾಥೇಶ್ವರ ಟ್ರಸ್ಟ್ ಭರಿಸಲಿದೆ.

ಮದುವೆಯಾಗಲು ಇಚ್ಛಿಸುವವರು 2026ರ ಏಪ್ರಿಲ್ 25ರೊಳಗೆ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾಹಿತಿಗೆ 08256 266644, ವಾಟ್ಸಾಪ್ 96634 64648 ಸಂಪರ್ಕಿಸಬಹುದು.

ಮದುವೆಯ ದುಂದು ವೆಚ್ಚ, ವರದಕ್ಷಿಣೆ ತಡೆಯಲು ವೀರೇಂದ್ರ ಹೆಗಡೆಯವರು 1972 ರಲ್ಲಿ ಉಚಿತ ಸಾಮೂಹಿಕ ವಿವಾಹ ಆರಂಭಿಸಿದ್ದರು. ಇದುವರೆಗೆ 13 ಸಾವಿರ ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular