HomeKarnatakaScholarship : ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Scholarship : ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಭದ್ರಾವತಿ‌ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ (ಎಸ್ ಎಸ್ ಪಿ) ಮೂಲಕ ತಮ್ಮ ಎಸ್ ಎ ಟಿ ಎಸ್ ಐಡಿ ಬಳಸಿ ಹೊಸದಾಗಿ ಅಥವಾ ನವೀಕರಣಕ್ಕಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.31.01.2027 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಹೆಚ್ಚಿನ ವಿವರ ಹಾಗೂ ಮಾಹಿತಿಗಾಗಿ ವಿದ್ಯಾರ್ಥಿಗಳು ಕಚೇರಿ ವೇಳೆಯಲ್ಲಿ ಖುದ್ದಾಗಿ ಭದ್ರಾವತಿಯ ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದು ಎಂದುಸಹಾಯಕ ನಿರ್ದೇಶಕರು (ಗ್ರೇಡ್ 1) ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೇಕಾರರ ಸಮ್ಮಾನ್ ಯೋಜನೆ ಧನಸಹಾಯಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಸರ್ಕಾರದ ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ 2026-27ನೇ ಸಾಲಿಗೆ ಜಿಲ್ಲೆಯ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷಿಕ ರೂ. 5,000 ಗಳ ಆರ್ಥಿಕ ನೆರವು ನೀಡುವ “ನೇಕಾರರ ಸಮ್ಮಾನ್ ಯೋಜನೆ” ಅಡಿಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಫಲಾನುಭವಿಗಳಿಗೆ ಈ ಯೋಜನೆಯ ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.2025-26ನೇ ಸಾಲಿನಲ್ಲಿ ನೋಂದಣಿ ಆಗದೆ ಇರುವ ಅರ್ಹ ಹೊಸ ನೇಕಾರರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. 4ನೇ ರಾಷ್ಟ್ರೀಯ ಕೈಮಗ್ಗ ಗಣತಿ ಪಟ್ಟಿಯಲ್ಲಿ ನೋಂದಾಯಿತರಾಗಿ ‘ಪೆಹಚಾನ್ ಕಾರ್ಡ್’ ಹೊಂದಿರಬೇಕು ಹಾಗೂ ಪ್ರಸ್ತುತ ನೇಕಾರಿಕೆ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರಬೇಕು.ಪಿಎಂಜೆಜೆಬಿವೈ-ಪಿಎಂಎಸ್‌ಬಿವೈ ಯೋಜನೆಯಡಿ ನೇಕಾರರು ಕಡ್ಡಾಯವಾಗಿ ನೋಂದಾಯಿಸಿಕೊಂಡಿರಬೇಕು.

ಅರ್ಹ ನೇಕಾರರು ನಿಗದಿತ ನಮೂನೆಯಲ್ಲಿ ತಮ್ಮ ಆಧಾರ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆಯ ವಿವರಗಳೊಂದಿಗೆ ದಿನಾಂಕ: 30.06.2026 ರ ಒಳಗೆ ಉಪ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಮಂಜುನಾಥ್ ಟವರ್ಸ್, 2ನೇ ಮಹಡಿ, ಗಾಂಧಿ ನಗರ, 1ನೇ ಮುಖ್ಯ ರಸ್ತೆ, ಶಿವಮೊಗ್ಗ – 577201 ಅರ್ಜಿ ಸಲ್ಲಿಸಬೇಕು.

ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ, ಅರ್ಹ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರ ವಿವರಗಳನ್ನು ಸರ್ಕಾರದ ‘ಸೇವಾಸಿಂಧು’ ಪೋರ್ಟಲ್‌ನಲ್ಲಿ ಭರ್ತಿ ಮಾಡಿ ನೇರವಾಗಿ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ 08182-223405 ಅನ್ನು ಸಂಪರ್ಕಿಸಬಹುದು ಅಥವಾ ಖುದ್ದಾಗಿ ಕಚೇರಿಗೆ ಭೇಟಿ ನೀಡಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಜಂಟಿ/ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular