2025-26 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯ ವಿದ್ಯಾರ್ಥಿ ವೇತನ ತಂತ್ರಾAಶದಲ್ಲಿ ಹಿಂದಿನ ಸಾಲಿನಲ್ಲಿ ವಿದ್ಯಾರ್ಥಿವೇತನ ಪಡೆದಿರುವ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ಅರ್ಜಿ ಸಲ್ಲಿಸುವಂತಿಲ್ಲ. ಹಿಂದಿನ ಶೈಕ್ಷಣಿಕ ಸಾಲಿನಲ್ಲಿ ಅರ್ಜಿಯು ತಿರಸ್ಕೃತಗೊಂಡು ವಿದ್ಯಾರ್ಥಿವೇತನ ಪಡೆಯದೇ ಇರುವಂತಹ ವಿದ್ಯಾರ್ಥಿಗಳು ಹಾಗೂ ಈ ಹಿಂದೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸದೇ ಇರುವಂತಹ ಮತ್ತು 2025-26 ನೇ ಸಾಲಿನ ನವೀನ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.
ವೆಬ್‌ಸೈಟ್ prematric Application Submission URL: http://ssp.postmatric.karnataka.gov.in/ssppre/ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ವಿದ್ಯಾನಗರ, ಬಿ ಹೆಚ್ ರಸ್ತೆ, ಶಿವಮೊಗ್ಗ ತಾಲ್ಲೂಕು ಕಚೇರಿ, ದೂ.ಸಂ: 08182-240512 ನ್ನು ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಶಿವಮೊಗ್ಗ ತಾಲ್ಲೂಕು ಸಹಾಯಕ ನಿರ್ದೇಶಕರು(ಗ್ರೇಡ್-1) ತಿಳಿಸಿದ್ದಾರೆ.