HomeJobsಪೌರ ಕಾರ್ಮಿಕರ ವಿಶೇಷ ನೇರ ನೇಮಕಾತಿಗೆ ಅರ್ಜಿ

ಪೌರ ಕಾರ್ಮಿಕರ ವಿಶೇಷ ನೇರ ನೇಮಕಾತಿಗೆ ಅರ್ಜಿ

ಪೌರಾಡಳಿತ ನಿರ್ದೇಶನದಂತೆ ಗ್ರೇಡ್1 ನಗರಸಭೆಗಳಿಗೆ 8, ಗ್ರೇಡ್ 2 ನಗರಸಭೆಗಳಿಗೆ 6, ಪುರಸಭೆ 3 ಮತ್ತು ಪಟ್ಟಣ ಪಂಚಾಯಿತಿಗಳಿಗೆ 3 ಪೌರಕಾರ್ಮಿಕರ ಹುದ್ದೆಗಳನ್ನು ನೇರ ನೇಮಕಾತಿಗೆ ಹಂಚಿಕೆ ಮಾಡಲಾಗಿತ್ತು.

ಈ ಹುದ್ದೆಗಳಿಗೆ ಒಳಮೀಸಲಾತಿ ಅಳವಡಿಸಿಕೊಂಡು ರೋಸ್ಟರ್ ಬಿಂದುವಿನ ಅನುಬಂಧದAತೆ ವರ್ಗವಾರು ವರ್ಗಿಕರಿಸಿಕೊಂಡು ಸರ್ಕಾರದ ವಿಶೇಷ ನೇಮಕಾತಿ ನಿಯಮಗಳ ರೀತ್ಯಾ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ನ. 28 ರೊಳಗಾಗಿ ಅರ್ಜಿಯನ್ನು ನಗರ ಸ್ಥಳೀಯ ಸಂಸ್ಥೆಗಳ ಕಚೇರಿಗಳಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಜಿಲ್ಲಾ ನಗರಾಭಿವೃದ್ದಿ ಕೋಶ, ದಾವಣಗೆರೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಅಧಿಕೃತ ವೆಬ್ ಸೈಟ್ http://davanageredudc.mrc.gov.in ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧಿಕೃತ ವೆಬ್ ಸೈಟ್ ಸಂಪರ್ಕಿಸಬೇಕೆಂದು ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಡಾ.ಎನ್. ಮಹಾಂತೇಶ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular