HomeLatest Newsಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ ಈ ಆರು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳು ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

2025-26ನೇ ಸಾಲಿನ ಶಿಷ್ಯವೇತನಕ್ಕೆ ಆಯ್ಕೆ ಪ್ರಕ್ರಿಯೆಯನ್ನು ಮೊಬೈಲ್/ ವಿಡಿಯೋ ಚಿತ್ರೀಕರಣದ ಮೂಲಕ ಈ ಕೆಳಕಂಡಂತೆ ಆಯ್ಕೆ ಮಾಡಲು ಅಕಾಡೆಮಿ ತೀರ್ಮಾನಿಸಿದೆ.

ಶಿಷ್ಯವೇತನ ಅರ್ಜಿಗಳ ಬಗ್ಗೆ ಮಾಹಿತಿಯನ್ನು ಅಕಾಡೆಮಿ ಪೇಸ್ ಬುಕ್ (face book: com/ karnatakasangeetanrutyaacdemy) ಮೂಲಕ ಪಡೆದು ವೆಬ್ ಸೈಟ್ (sangeetanritya academy. karnataka.gov.in) ನಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿಯನ್ನು ಆಯಾಯ ಜಿಲ್ಲೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೆಶಕರ ಕಚೇರಿಯಲ್ಲಿ ಪಡೆಯಬಹುದಾಗಿದೆ.

ಸಂದರ್ಶನದ ಬದಲಿಗೆ ಅಭ್ಯರ್ಥಿಗಳು ಇನ್ನು ಮುಂದೆ ಅರ್ಜಿಯಲ್ಲಿ ನೀಡಿರುವ ಪಠ್ಯಕ್ರಮವನ್ನು ಮೊಬೈಲ್/ ವಿಡಿಯೋ ಚಿತ್ರೀಕರಿಸಿ, ಪೆನ್‍ಡ್ರೈವ್‍ನಲ್ಲಿ ಅಳವಡಿಸಿ, ಪೆನ್‍ಡ್ರೈವ್‍ನೊಂದಿಗೆ ಅರ್ಜಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ಕಾರ್ಯಾಲಯಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ತಲುಪಿಸಬಹುದು.

ಈ ರೀತಿಯಾಗಿ ಬಂದ ಅರ್ಜಿಗಳನ್ನು ಆಯಾಯ ಕಲಾ ಪ್ರಕಾರಕ್ಕೆ ಅನುಗುಣವಾಗಿ ತೀರ್ಪುಗಾರರು ಅಭ್ಯರ್ಥಿಗಳು ಚಿತ್ರೀಕರಿಸಿ, ಕಳುಹಿಸಿಕೊಟ್ಟಿರುವ ಪೆನ್‍ಡ್ರೈವ್ ಅನ್ನು ಪರಿಶೀಲಿಸಿ, ಶಿಷ್ಯವೇತನಕ್ಕೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಪಠ್ಯಕ್ರಮ ಚಿತ್ರೀಕರಿಸಿದ ಪೆನ್‍ಡ್ರೈವ್‍ನೊಂದಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್, 20 ಕೊನೆಯ ದಿನವಾಗಿದೆ. ತೀರ್ಪುಗಾರರ ತೀರ್ಮಾನವೇ ಅಂತಿಮ. ಆಸಕ್ತ ಅರ್ಹ ಕಲಾವಿದರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಹಾಗೂ ಸಿಬ್ಬಂದಿಗಳನ್ನು ಕಚೇರಿ ವೇಳೆಯಲ್ಲಿ ಭೇಟಿ ಮಾಡುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಕೋರಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular