HomeKarnatakaಕುರಿ ಅಥವಾ ಮೇಕೆ ಘಟಕ ಸ್ಥಾಪಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಕುರಿ ಅಥವಾ ಮೇಕೆ ಘಟಕ ಸ್ಥಾಪಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಕುರಿ ಅಥವಾ ಮೇಕೆ (10+1) ಘಟಕ ಸ್ಥಾಪಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಸಹಾಯಧನ ಪಡೆಯಲಿಚ್ಚಿಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕೂಲಿ ಕಾರ್ಮಿಕರು ಮತ್ತು ಪಶು ಸಂಗೋಪನೆಯಲ್ಲಿ ತೊಡಗಿರುವವರು, 18 ರಿಂದ 60 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ.ಮಹಿಳೆಯರಿಗೆ ಶೇ.33.3 ಮತ್ತು ವಿಶೇಷಚೇತನರಿಗೆ ಶೇ.3 ರಷ್ಟು ಮೀಸಲಾತಿ ಕಲ್ಪಿಸಲಾಗಿದ್ದು, ಬಳ್ಳಾರಿ ಜಿಲ್ಲೆಯ ತಾಲ್ಲೂಕು ಮತ್ತು ವಿಧಾನಸಭಾ ಕ್ಷೇತ್ರವಾರು ವಿಂಗಡಿಸಿ ಗುರಿ ನಿಗಧಿಪಡಿಸಿ ಅನುಷ್ಠಾನಗೊಳಿಸಲಾಗುವುದು.

ಅರ್ಜಿ ಸಲ್ಲಿಸಬಯಸುವವರು ಹೊಸಪೇಟೆಯ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಬಳ್ಳಾರಿ ಜಿಲ್ಲೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ತಾಲ್ಲೂಕು ಮಟ್ಟದ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿದ ಅರ್ಜಿ ಮತ್ತು ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 7 ರೊಳಗಾಗಿ ಜಿಲ್ಲಾ ಅನುಷ್ಠಾನಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ಹೊಸಪೇಟೆಯ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಸಮೀಪದ ಪಶು ವೈದ್ಯ ಸೇವಾ ಸಂಸ್ಥೆಗಳ ಕಚೇರಿಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅತಿಥಿ ಬೋಧಕ ಹುದ್ದೆಗೆ ಅರ್ಜಿ ಆಹ್ವಾನ

ಬಳ್ಳಾರಿ :   ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಸಂಸ್ಥೆಯ ಬಹುಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಎಲೆಕ್ಟಿçಕಲ್ ವಿಭಾಗದಲ್ಲಿ ಅತಿಥಿ ಬೋಧಕ ಹುದ್ದೆಗೆ ಅರ್ಹರಿಂದ ಆಹ್ವಾನಿಸಲಾಗಿದೆ.

ಇಇಇ ವಿಭಾಗದಲ್ಲಿ ಬಿಇ (ಬಿ.ಟೆಕ್) ಪದವಿ ಪೂರ್ಣಗೊಳಿಸಿದ ಪದವೀಧರರಾಗಿರಬೇಕು. 3 ರಿಂದ 5 ವರ್ಷಗಳ ಅನುಭವವಿರಬೇಕು.ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್ ಮೆಂಟ್ ನ ಐಶ್ವರ್ಯ ಕಾಲೋನಿಯ ಐಟಿಐ ಕ್ಯಾಂಪಸ್ ನ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲ ಮುತ್ತಣ್ಣ ಧರ್ಮಂತಿ ಅಥವಾ ದೂ.08392-200087, ಮೊ.9620057086 ಗೆ ಸಂಪರ್ಕಿಸಬಹುದು ಎಂದು ಜಿಟಿಟಿಸಿ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular