ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಯುವ ಪರಿವರ್ತಕರ ಹುದ್ದೆಗಳಿಗೆ ಅರ್ಜಿ

ಕರ್ನಾಟಕ ಸರ್ಕಾರ ಹಾಗೂ ಜನ ಆರೋಗ್ಯ ಕೇಂದ್ರ, ಎಪಿಡೀಮಿಯಾಲಜಿ ವಿಭಾಗ ನಿಮ್ಹಾನ್ಸ್ ಇವರ ಸಹಯೋಗದಲ್ಲಿ 2025-26ನೇ ಸಾಲಿನ ಧಾರವಾಡ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕಾರ್ಯಕ್ರಮದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಯುವ ಪರಿವರ್ತಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಪದವಿ ಹಾಗೂ ಮೇಲ್ಪಟ್ಟು(Psychology/Social Work  ಪದವಿ ತೇರ್ಗಡೆ ಹೊಂದಿದವರಿಗೆ ಆದ್ಯತೆ ನೀಡಲಾಗುವುದು) ಅಭ್ಯರ್ಥಿಗಳು ಡಿಸೆಂಬರ್ 5, 2025 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಧಾರವಾಡ ಜಿಲ್ಲೆ ಇವರನ್ನು ಅಥವಾ ಕಛೇರಿ ಕ್ಷೇತ್ರ ಸಂಪರ್ಕಧಿಕಾರಿಗಳು, ದೂರವಾಣಿ ಸಂಖ್ಯೆ: 6360373654 ಮತ್ತು 9964303548 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read