HomeKarnatakaವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ಆದರ್ಶ ವಿದ್ಯಾಲಯದಲ್ಲಿ 7,8,9 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ಆದರ್ಶ ವಿದ್ಯಾಲಯದಲ್ಲಿ 7,8,9 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ : 2023-24ನೇ ಸಾಲಿಗೆ ಸರ್ಕಾರಿ ಆದರ್ಶ ವಿದ್ಯಾಲಯದ 7, 8 ಮತ್ತು 9 ನೇ ತರಗತಿ ಪ್ರವೇಶಕ್ಕೆ ಖಾಲಿ ಸೀಟುಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಆದರ್ಶ ವಿದ್ಯಾಲಯದ ಮುಖ್ಯಗುರುಗಳಾದ ಎಂ.ಕುಮಾರಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಖಾಲಿ ಸೀಟುಗಳ ದಾಖಲಾತಿಗಾಗಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 05 ಆಗಿರುತ್ತದೆ.ಹೆಚ್ಚಿನ ಮಾಹಿತಿಗಾಗಿ ನಗರದ ಈದ್ಗಾ ರಸ್ತೆಯ ಹೀರಾಳ್ಕುಡಂನ ಆದರ್ಶ ವಿದ್ಯಾಲಯ ಅಥವಾ ಮೊ.9449463870ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

ಡಿಪ್ಲೋಮಾ ಕೋರ್ಸ್ನಡಿ ಸಾಮಥ್ಯ ವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳ್ಳಾರಿ : ಸಮಾಜ ಕಲ್ಯಾಣ ಇಲಾಖೆಯಿಂದ 2023-24 ನೇ ಶೈಕ್ಷಣಿಕ ವರ್ಷದಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಈಗಾಗಲೇ ಅಂತಿಮ ವರ್ಷ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳಿಗೆ C-DAC (CENTRE FOR HPC DEVELOPMENT OF ADVANCED COMPUTING) ಸಂಸ್ಥೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಿಇ, ಬಿ.ಟೆಕ್, ಬಿ.ಎಸ್ಸಿ, ಬಿಸಿಎ ಹಾಗೂ ಎಂಸಿಎ, ಎಂಎಸ್ಸಿ ಪದವೀಧರರಿಗೆ ಡಿಪ್ಲೋಮಾ ಕೋರ್ಸ್ನಡಿ 06 ತಿಂಗಳ ಸಾಮಥ್ರ್ಯ ವೃದ್ಧಿ ತರಬೇತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಅವಧಿಯಲ್ಲಿ ಮಾಸಿಕ ರೂ.10 ಸಾವಿರಗಳ ಭತ್ಯೆ ನೀಡಲಾಗುವುದು. ಹಾಗೂ ವಿಫುಲ ಉದ್ಯೋಗವಕಾಶ ನೀಡಲಾಗುತ್ತದೆ.2022-23 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಿಇ, ಬಿ.ಟೆಕ್, ಬಿ.ಎಸ್ಸಿ, ಬಿಸಿಎ ಹಾಗೂ ಎಂಸಿಎ, ಎಂಎಸ್ಸಿ ಪದವೀಧರರು ಉತ್ತೀರ್ಣರಾದ ವಿದ್ಯಾರ್ಥಿಗಳು ಹಾಗೂ ಅಂತಿಮ ವರ್ಷದಲ್ಲಿ ಸದರಿ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ನಗರದ ಕೋಟೆ ಪ್ರದೇಶದಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ದೂ.08392-267932 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸತೀಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular