
ವಿದ್ಯಾರ್ಥಿಗಳು ಅಂತರ್ಜಾಲ ತಾಣ https://shp.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 16 ಕೊನೆಯ ದಿನವಾಗಿರುತ್ತದೆ.ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ಸೈಟ್ https://bcwd.karnataka.gov.in/ ನ್ನು ನೋಡಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ [email protected] ಗೆ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ದಾಖಲೆಗಳೊಂದಿಗೆ ಸಂಪರ್ಕಿಸುವುದು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770005 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಜಿಲ್ಲಾ ಅಧಿಕಾರಿ ಎಸ್.ಆರ್.ಸುರೇಶ್ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

