ಗಮನಿಸಿ : ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಉಡುಪಿ : ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಮಣಿಪಾಲದಲ್ಲಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ, ನವೀಕರಣ ವಿದ್ಯಾರ್ಥಿಗಳ ಸೀಟು ಹಂಚಿಕೆಯಾಗಿ ಉಳಿಕೆ ಸೀಟುಗಳಿಗೆ ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾಂಶದ ಮೂಲಕ ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಚೇರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2573596, ಸಹಾಯವಾಣಿ ಸಂಖ್ಯೆ : 8277799990, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಅಜಾದ್ ಭವನ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ದೂರವಾಣಿ ಸಂಖ್ಯೆ: 0820-2574596 ಅಥವಾ ಕಾರ್ಕಳ ದೂರವಾಣಿ ಸಂಖ್ಯೆ: 08258-231101 ಹಾಗೂ ಕುಂದಾಪುರ ದೂರವಾಣಿ ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read