HomeKarnatakaಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಸತಿ ಶಾಲೆಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಸತಿ ಶಾಲೆಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಶಿಕಾರಿಪುರ ಸಮಾಜ ಕಲ್ಯಾಣ ಇಲಾಖೆಯು 2024-25ನೇ ಶೈಕ್ಷಣಿಕ ಸಾಲಿಗೆ ಡಾ.ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಗಳಾದ ಶಿಕಾರಿಪುರ/ ಭದ್ರಾಪುರ/ ಹೊಸೂರು/ ಬೇಗೂರು/ ಹಾರೋಗೊಪ್ಪ/ ಕಿಟ್ಟದಹಳ್ಳಿ/ ಅಂಬಾರಗೊಪ್ಪ/ ಶಿರಾಳಕೊಪ್ಪ/ ತಾಳಗುಂದ/ ಬಿಳಕಿ/ ತಡಸನಹಳ್ಳಿ, ಡಾ.ಬಿ.ಆರ್. ಅಂ.ಸ.ಮೆ.ಪೂ. ಬಾಲಕೀಯರ ವಿದ್ಯಾರ್ಥಿನಿಲಯಗಳಾದ ಶಿಕಾರಿಪುರ/ ಶಿರಾಳಕೊಪ್ಪ/ ಈಸೂರು, ಡಾ.ಬಿ.ಆರ್.ಅಂ.ಸರ್ಕಾರಿ ವಸತಿ ಶಾಲೆಗಳಾದ ಮಂಚಿಕೊಪ್ಪ/ ಮಳವಳ್ಳಿ ತಾಂಡ, ಡಾ. ಬಿ.ಆರ್. ಅಂ. ಸ. ಮೆ.ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯ – ಶಿಕಾರಿಪುರ ಮೆಟ್ರಿಕ್ ಪೂರ್ವ/ನಂತರದ ವಿದ್ಯಾರ್ಥಿ ನಿಲಯಗಳು/ ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಹ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಇತರೆ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು ನಿಗಧಿತ ನಮೂನೆ ಅರ್ಜಿಗಳನ್ನು ಆಯಾ ನಿಲಯ/ವಸತಿ ಶಾಲೆಗಳಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಜೂನ್ 15ರೊಳಗಾಗಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ಆಯಾ ನಿಲಯ/ ವಸತಿ ಶಾಲೆಗಳ ವಾರ್ಡನ್/ ಮುಖ್ಯ ಶಿಕ್ಷಕರುಗಳನ್ನು ಅಥವಾ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಶಿಕಾರಿಪುರ ಇವರನ್ನು ಸಂಪರ್ಕಿಸುವುದು.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular