ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಶೈಕ್ಷಣಿಕ ಸಾಲಿಗೆ ಜಿಲ್ಲೆಯ ಬಳ್ಳಾರಿ, ಕುರುಗೋಡು ಹಾಗೂ ಕಂಪ್ಲಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ಜಾತಿ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ, ಬಾಲಕೀಯರ ವಿದ್ಯಾರ್ಥಿ ನಿಲಯಗಳಿಗೆ 5 ರಿಂದ 10 ನೇ ತರಗತಿ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಮಮತಾ.ಪಿ ಅವರು ತಿಳಿಸಿದ್ದಾರೆ.

ಬೇಕಾದ ದಾಖಲಾತಿಗಳು

ಸ್ಯಾಟ್ಸ್ (SATS) ಸಂಖ್ಯೆ, ಆಧಾರ್ ಸಂಖ್ಯೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿ ಫೋಟೋ, ಬ್ಯಾಂಕ್ ಖಾತೆ ಸಂಖ್ಯೆ, ಮೊಬೈಲ್ ಸಂಖ್ಯೆ, ಹಿಂದಿನ ವರ್ಷದ ಅಂಕಪಟ್ಟಿ ಹಾಗೂ ತಂದೆ, ತಾಯಿ ಆಧಾರ್ ಪ್ರತಿ.
ಆಸಕ್ತ ವಿದ್ಯಾರ್ಥಿಗಳು ಪ್ರವೇಶ ಪಡೆಯಲು ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ www.sw.kar.nic.in ಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಿದ ನಂತರ ಸ್ವೀಕೃತಿ ಪ್ರತಿಯೊಂದಿಗೆ ಪೂರಕ ದಾಖಲೆಗಳನ್ನು ಬಳ್ಳಾರಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ನಿಲಯಪಾಲಕರ ಕಚೇರಿಗೆ ಸಲ್ಲಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read