BIG NEWS : ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ವಿವಿಧ ಕೋರ್ಸ್’ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ದಾವಣಗೆರೆ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಸಕ್ತ ಶೈಕ್ಷಣಿಕ ಸಾಲಿನ (ಜನವರಿ ಅವೃತ್ತಿ) ಪ್ರಥಮ ವರ್ಷದ ಬಿ.ಎ, ಬಿ.ಕಾಂ, ಬಿ.ಎಸ್ಸಿ., ಬಿ.ಲಿಬ್. ಐ.ಎಸ್ಸಿ., ಬಿ.ಸಿ.ಎ., ಬಿ.ಬಿ.ಎ, ಬಿ.ಎಸ್.ಡಬ್ಲ್ಯೂ, ಎಂ.ಎ, ಎಂ.ಕಾA, ಎಂ.ಎ-ಎಂ.ಸಿ.ಜೆ., ಎಂ.ಲಿಬ್, ಐಎಸ್ಸಿ., ಎಂ.ಬಿ.ಎ, ಎಂ.ಎಸ್ಸಿ ಎಂ.ಸಿ.ಎ, ಎಂ.ಎಸ್.ಡಬ್ಲ್ಯೂ, ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ಮತ್ತು ಪಿಜಿ-ಡಿಪ್ಲೊಮಾ, ಡಿಪ್ಲೊಮಾ, ಸರ್ಫಿಕೇಟ್ ಕೋರ್ಸ್ಗಳಿಗೆ ಪ್ರವೇಶಾವಕಾಶ ಪ್ರಾರಂಭವಾಗಿದೆ.

ಎರಡು ಶೈಕ್ಷಣಿಕ ಕೋರ್ಸ್ಗಳನ್ನು ಏಕಕಾಲದಲ್ಲಿ ಒಂದು ಭೌತಿಕ ಕ್ರಮದಲ್ಲಿ ಮತ್ತೊಂದು ದೂರಶಿಕ್ಷಣ ಕ್ರಮದಲ್ಲಿ ಓದಲು ಅವಕಾಶವಿದೆ. ವಿದ್ಯಾರ್ಥಿಗಳು  ಅರ್ಜಿಯನ್ನು ಭರ್ತಿ ಮಾಡಿ, ದಾವಣಗೆರೆ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಆನ್ಲೈನ್ ಮುಖಾಂತರ ಪ್ರವೇಶಾತಿ ಶುಲ್ಕವನ್ನು ಪಾವತಿಸಿ ಪ್ರವೇಶ ಪಡೆಯಬಹುದು. ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿನಿಯರಿಗೆ, ಡಿಫೆನ್ಸ್ ಹಾಗೂ ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ ಮತ್ತು ಆಟೋ, ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ರಿಯಾಯಿತಿ ನೀಡಲಾಗುವುದು. ಅಲ್ಲದೇ ಕೋವಿಡ್-19 ನಿಂದ ಮೃತಪಟ್ಟವರ ಮಕ್ಕಳಿಗೆ, ತೃತೀಯ ಲಿಂಗಿಗಳಿಗೆ, ದೃಷ್ಠಿಹೀನ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 9844926125, 8971004272, 8310676181, 9902517906, 9008905457, 8747919317, ಸಂಪರ್ಕಿಸಲು ಅಥವಾ ಖುದ್ದಾಗಿ ಕ.ರಾ.ಮು.ವಿ. ಪ್ರಾದೇಶಿಕ ಕೇಂದ್ರ, ಜೆ.ಹೆಚ್.ಪಟೇಲ್ ಬಡಾವಣೆ, ಶಾಮನೂರು ಹಿಂಭಾಗ, ನಾಗನೂರು ರಸ್ತೆಯಲ್ಲಿರುವ ಕಚೇರಿಯನ್ನು ಸಂಪರ್ಕಿಸಲು ಕ.ರಾ.ಮು.ವಿ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರಾದ ಡಾ.ವಿಜಯ್ ಪ್ರಕಾಶ್ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read