HomeKarnatakaJOB ALERT : ಭಾರತೀಯ ಸೇನೆಯಿಂದ 'ಅಗ್ನಿವೀರ್' ನೇಮಕಾತಿ ಪರೀಕ್ಷೆಗೆ ಆನ್'ಲೈನ್ ಅರ್ಜಿ ಆಹ್ವಾನ |Agniveer...

JOB ALERT : ಭಾರತೀಯ ಸೇನೆಯಿಂದ ‘ಅಗ್ನಿವೀರ್’ ನೇಮಕಾತಿ ಪರೀಕ್ಷೆಗೆ ಆನ್’ಲೈನ್ ಅರ್ಜಿ ಆಹ್ವಾನ |Agniveer Recruitment 2025

ಬೆಂಗಳೂರು : ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅಗ್ನಿಪಥ್ ಯೋಜನೆಯಡಿ 2025-26ನೇ ಸಾಲಿನ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಆಸಕ್ತರು ವೆಬ್ ಪೋರ್ಟಲ್- WWW.JOININDIANARMY.NIC.IN ಮೂಲಕ ಏಪ್ರಿಲ್ 10 ಒಳಗಾಗಿ ಅರ್ಜಿ ಸಲ್ಲಿಸಬಹುದು. ಬರುವ ಜೂನ್ನಲ್ಲಿ ಪರೀಕ್ಷೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಸೇನಾ ನೇಮಕಾತಿ ಕಛೇರಿ ದೂರವಾಣಿ ಸಂಖ್ಯೆ- 0824-2951279 ಹಾಗೂ [email protected] ಸಂಪರ್ಕಿಸಬಹುದು. ಭಾರತೀಯ ಸೇನೆಯಲ್ಲಿ ಆಯ್ಕೆಯು ‘ನ್ಯಾಯಯುತ ಮತ್ತು ಪಾರದರ್ಶಕ’ ನಡೆಯುತ್ತದೆ. ಅಭ್ಯರ್ಥಿಗಳು ಯಾವುದೇ ಹಂತದಲ್ಲೂ ಲಂಚ ನೀಡಬಾರದು. ಆಮಿಶ ಒಡ್ಡುವ ವ್ಯಕ್ತಿಗಳಿಗೆ ಬಲಿಯಾಗಬಾರದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿರುತ್ತಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular