HomeKarnatakaJOB ALERT : 'ಅಗ್ನಿಪಥ್' ಯೋಜನೆಯಡಿ ಅಗ್ನಿವೀರ್ ವಾಯು ಹುದ್ದೆ ನೋಂದಣಿಗೆ ಅರ್ಜಿ ಆಹ್ವಾನ

JOB ALERT : ‘ಅಗ್ನಿಪಥ್’ ಯೋಜನೆಯಡಿ ಅಗ್ನಿವೀರ್ ವಾಯು ಹುದ್ದೆ ನೋಂದಣಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಭಾರತೀಯ ವಾಯುಪಡೆಯ ವಿಜ್ಞಾನ ಮತ್ತು ವಿಜ್ಞಾನೇತರ ಸ್ಟ್ರೀಮ್ಗಳಿಗಾಗಿ ಅಗ್ನಿಪಥ್ ಯೋಜನೆಯಡಿ ವಾಯುಸೇನೆಯಲ್ಲಿ ಅಗ್ನಿವೀರ್ ವಾಯು ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲು ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ನೊಂದಣಿಗೆ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆಯು ದ್ವಿತೀಯ ಪಿ.ಯು.ಸಿ(ವಿಜ್ಞಾನ, ವಾಣಿಜ್ಯ, ಕಲೆ ಮತ್ತು ಡಿಪ್ಲೋಮಾ, ಇತರೆ ವಿಷಯಗಳಲ್ಲಿ)ಯಲ್ಲಿ ಶೇ.50 ರಷ್ಟು ಅಂಕ ಮತ್ತು ಇಂಗ್ಲೀಷ್ನಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ವಯೋಮಿತಿಯು ಅಭ್ಯರ್ಥಿಯು 2003 ಜೂನ್ 27 ರಿಂದ 2006 ಡಿಸೆಂಬರ್ 27 ರ ನಡುವೆ ಜನಿಸಿರಬೇಕು.

ಅಭ್ಯರ್ಥಿಗಳು ನೊಂದಾಯಿಸಿಕೊಳ್ಳಲು ಕೊನೆಯ ದಿನ ಆಗಸ್ಟ್ 18 ಆಗಿರುತ್ತದೆ. ಆನ್ಲೈನ್ ನೊಂದಣಿಗಾಗಿ https://agnipathvayu.cdac.in ಲಿಂಕ್ ಬಳಸಬಹುದಾಗಿದೆ. ಆನ್ಲೈನ್ ಪರೀಕ್ಷೆಯು ಅಕ್ಟೋಬರ್ 13 ರಂದು ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ.08392-273988 ಅಥವಾ https://careerindianairforce.cdac.in ವೆಬ್ಸೈಟ್ಗೆ ಭೇಟಿ ನೀಡಬಹುದಾಗಿದೆ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular