HomeLive Newsಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ವಿಷಯ ವ್ಯಾಸಂಗ ಮಾಡಿರುವ ಪದವಿ, ಸ್ನಾತಕೋತ್ತರ ಪದವಿಧರರಿಗೆ ಬಳ್ಳಾರಿ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ತರಬೇತಿಗಾಗಿ ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕದAದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಎಂದು ನಮೂದಿಸಬೇಕು.ಆಯ್ಕೆಯಾದ ಅಭ್ಯರ್ಥಿಗಳು ಸಂದರ್ಶನದ ವೇಳೆ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಆಯ್ಕೆಯಾಗಿ ತರಬೇತಿಗೆ ಹಾಜರಾಗುವ ಸಂದರ್ಭದಲ್ಲಿ ಮೂಲ ದಾಖಲಾತಿಗಳನ್ನು ಬಳ್ಳಾರಿ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಅಭ್ಯರ್ಥಿಗಳು ಸ್ನಾತ್ತಕೋತ್ತರ ಅಂತಿಮ ವರ್ಷದ ಪದವಿಯ ಅಂಕಪಟ್ಟಿಯೊAದಿಗೆ ಅರ್ಜಿ ಸಲ್ಲಿಸಬೇಕು. ಅಂಕಪಟ್ಟಿಯನ್ನು ನಿರೀಕ್ಷಿಸಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತರಬೇತಿಯ ಅವಧಿ ವೇಳೆ ಮಾಹೆಯಾನ 15,000 ರೂ. (ಹದಿನೈದು ಸಾವಿರ ರೂಪಾಯಿಗಳು ಮಾತ್ರ) ಗಳ ಶಿಷ್ಯವೇತನ ನೀಡಲಾಗುವುದು. ಅವಧಿ ಈ ತರಬೇತಿಯು 2026ರ ಕ್ಯಾಲೆಂಡರ್ ಅವಧಿಯ ಜನವರಿ-2026ರ ಮಾಹೆಯಿಂದ ಪ್ರಾರಂಭಗೊಂಡು ಡಿಸೆಂಬರ್-2026ಕ್ಕೆ ಕೊನೆಗೊಳ್ಳಲಿದೆ. ಈ ತರಬೇತಿಯು 12 ತಿಂಗಳ ಅಪ್ರೆಂಟಿಸ್ ತರಬೇತಿಯಾಗಿದ್ದು, ತಾತ್ಕಾಲಿಕವಾಗಿರುತ್ತದೆ.

ತರಬೇತಿಯ ಅವಧಿಯಲ್ಲಿ ಬೇರೆ ಉದ್ಯೋಗ ಮಾಡುವಂತಿಲ್ಲ. ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ.ಆಸಕ್ತರು ಅರ್ಜಿಯನ್ನು 2025ರ ಡಿಸೆಂಬರ್ 26 ರೊಳಗಾಗಿ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಬಳ್ಳಾರಿ ಇಲ್ಲಿಗೆ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಿಂದ ಪಡೆಯಬಹುದು ಎಂದು ಹಿರಿಯ ಸಹಾಯಕ ನಿರ್ದೇಶಕ ತುಕಾರಾಂ ರಾವ್ ಬಿ.ವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular