HomeKarnatakaಗಮನಿಸಿ : ಮಾಜಿ ಸೈನಿಕರ ಮಕ್ಕಳಿಗೆ ಪುಸ್ತಕ ಅನುದಾನ, ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಗಮನಿಸಿ : ಮಾಜಿ ಸೈನಿಕರ ಮಕ್ಕಳಿಗೆ ಪುಸ್ತಕ ಅನುದಾನ, ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಡಿಜಿಟಲ್ ಡೆಸ್ಕ್ :   ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಒಂದನೇ ತರಗತಿಯಿಂದ ಪಿಯುಸಿ ಎರಡನೇ ವರ್ಷದವರೆಗೆ ಓದುವ ಮಕ್ಕಳಿಗೆ ಪುಸ್ತಕ ಅನುದಾನಕ್ಕಾಗಿ ಮತ್ತು ಡಿಗ್ರಿ/ಡಿಪ್ಲೊಮಾ/ಜೆ.ಓ.ಸಿ/ ವೃತ್ತಿಪರ ಕಾಲೇಜುಗಳಲ್ಲಿ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಕರ್ನಾಟಕದಲ್ಲಿರುವ ಹಾಗೂ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಿಲಿಟರಿ ಪಿಂಚಣಿ ರಹಿತ ಕರ್ನಾಟಕದ ಮಾಜಿ ಸೈನಿಕರ ಹಾಗೂ ಕರ್ನಾಟಕದಲ್ಲ ನೆಲೆಸಿರುವ ಹೊರರಾಜ್ಯದ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತುಪಡಿಸಿ) ಅರ್ಜಿ ಆಹ್ವಾನಿಸಿದೆ.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಒಂದನೇ ತರಗತಿಯಿಂದ ಅಂತಿಮ ಪದವಿ/ಡಿಪ್ಲೊಮಾ, ವೃತ್ತಿಪರ ಪದವಿವರೆಗಿನ ವಿದ್ಯಾರ್ಥಿಗಳು ದಿ: 30/09/2024 ರೊಳಗಾಗಿ ಯಾವ ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿರುವೋ ಆ ಜಿಲ್ಲೆಗೆ ಸಂಬಂಧಿತ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಯಲ್ಲಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕ ಡಾ. ಸಿ.ಎ.ಹಿರೇಮಠರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಇಲಾಖಾ ಕಚೇರಿ ದೂ.ಸಂ.: 08182-220925ನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular