HomeKarnatakaಗಮನಿಸಿ : ಕರ್ನಾಟಕ ಜಾನಪದ ಅಕಾಡೆಮಿಯಿಂದ ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

ಗಮನಿಸಿ : ಕರ್ನಾಟಕ ಜಾನಪದ ಅಕಾಡೆಮಿಯಿಂದ ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಜಾನಪದ ಅಕಾಡೆಮಿಯು 2022ನೇ ಸಾಲಿನಲ್ಲಿ (ದಿನಾಂಕ:01.01.2022 ರಿಂದ 31.12.2022ರವರೆಗೆ) ಹಾಗೂ 2023ನೇ ಸಾಲಿನಲ್ಲಿ (ದಿನಾಂಕ:01.01.2023 ರಿಂದ 31.12.2023ರವರೆಗೆ) ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ (ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತು ಪಡಿಸಿ) ಕನಿಷ್ಟ 150 ಪುಟಗಳಿಗೂ ಮೇಲ್ಪಟ್ಟಿರುವಂತೆ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ- ಸಂಶೋಧನೆ, ಜನಪದ ಸಂಕೀರ್ಣ ಈ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಿದೆ.

ಲೇಖಕರು/ ಪ್ರಕಾಶಕರು/ ಸಂಪಾದಕರು 4 ಕೃತಿಗಳನ್ನು ದ್ವಿಪ್ರತಿ ಬಿಲ್ಲಿನೊಂದಿಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 ವಿಳಾಸಕ್ಕೆ ದಿನಾಂಕ:20-07-2024ರೊಳಗೆ ಖುದ್ದಾಗಿ, ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಿಕೊಡಲು ಪ್ರಕಟಣೆ ತಿಳಿಸಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular