HomeKarnatakaಗಮನಿಸಿ : ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್’ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

ಗಮನಿಸಿ : ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್’ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್(ಡಿಸಿಎಂ ತರಬೇತಿ) ಸಂಸ್ಥೆಯಲ್ಲಿ 6 ತಿಂಗಳ (ಡಿಸಿಎಂ) ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಯು ಇದೇ ಜನವರಿ, 01 ರಿಂದ ಪ್ರಾರಂಭವಾಗಲಿದೆ.

ಕೊಡಗು, ಹಾಸನ ಹಾಗೂ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕುಗಳು ಡಿಸಿಎಂ ತರಬೇತಿ ಸಂಸ್ಥೆಯ ವ್ಯಾಪ್ತಿಯಲ್ಲಿ ಬರಲಿದ್ದು, ಅರ್ಹರಿಂದ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಮಾಸಿಕ ರೂ.600 ಹಾಗೂ ಇತರೆ ಅಭ್ಯರ್ಥಿಗಳಿಗೆ ರೂ.500 ಶಿಷ್ಯವೇತನ ನೀಡಲಾಗುತ್ತದೆ. ಉಚಿತ ವಸತಿ ಗೃಹ ಸೌಲಭ್ಯವಿದೆ. ಸಹಕಾರ ಸಂಘ/ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವವರಿಗೆ ಆದ್ಯತೆ ನೀಡಲಾಗುವುದು ಹಾಗೂ ಖಾಸಗಿ ಅಭ್ಯರ್ಥಿಗಳಿಗೂ ಅವಕಾಶವಿದೆ. ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲಕರ. ರಿಯಾಯಿತಿ ದರದಲ್ಲಿ ಡಿಸಿಎಂ ಪಠ್ಯ ಪುಸ್ತಕಗಳನ್ನು ನೀಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೂರಶಿಕ್ಷಣ (ಡಿಸಿಎಂ)(ಸಹಕಾರ ಸಂಘ/ಸಂಸ್ಥೆ/ಬ್ಯಾಂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಮಾತ್ರ) ಇತ್ತೀಚಿನ ಕಾಯಿದೆ ತಿದ್ದುಪಡಿ ಅನ್ವಯ ಕೆ.ಸಿ.ಎಸ್ ನಿಯಮ 17(ಎ)(ಬಿ) ಪ್ರಕಾರ ಪದೋನ್ನತಿ ಹೊಂದಬೇಕಾದರೆ ಕಡ್ಡಾಯವಾಗಿ ಡಿಸಿಎಂ ಕೋರ್ಸ್ ಪಡೆಯಬೇಕಾಗುತ್ತದೆ. ಪ್ರತಿ ವರ್ಷ ಜನವರಿ-ಜೂನ್ ಮತ್ತು ಜುಲೈ-ಡಿಸೆಂಬರ್‍ವರೆಗೆ ಎರಡು ಅಧಿವೇಶನಗಳು ಸಂಪರ್ಕ ರಹಿತ ಕೋರ್ಸ್ ಪ್ರವೇಶಕ್ಕೆ ಅವಕಾಶ ಅಧ್ಯಯನ ಸಾಹಿತ್ಯ ನೀಡಲಾಗುವುದು. 10 ದಿನಗಳ ಸಂಪರ್ಕ ತರಗತಿಗಳು, ಪದೋನ್ನತಿ ಹಾಗೂ ವಾರ್ಷಿಕ ಬಡ್ತಿಗೆ ಉಪಯುಕ್ತ ಪ್ರವೇಶಾತಿಗೆ ಆನ್‍ಲೈನ್ ಲಿಂಕ್: Website: www.kscfdcm.co.in

ಅರ್ಜಿ ಫಾರಂ ದೊರೆಯುವ ಸ್ಥಳ ಮತ್ತು ವಿಳಾಸ: ಪ್ರಾಂಶುಪಾಲರು, ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಮುತ್ತಪ್ಪ ದೇವಸ್ಥಾನದ ಹತ್ತಿರ, ಅಬ್ಬಿಫಾಲ್ಸ್ ರಸ್ತೆ, ಮಡಿಕೇರಿ -571201. ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಹಾಸನ, ಮೈಸೂರು, ಚಿಕ್ಕಮಗಳೂರು ಜಿಲ್ಲಾ ಸಹಕಾರ ಯೂನಿಯನ್. ಹೆಚ್ಚಿನ ಮಾಹಿತಿಗೆ ದೂ.ಸಂ. 8792628437, 9663153922, 8762925862, 8762110952, 9845318364 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಇನ್ಸ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್‍ನ ಪ್ರಾಂಶುಪಾಲರಾದ ಡಾ.ಆರ್.ಎಸ್.ರೇಣುಕಾ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular