HomeKarnatakaಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2022 ನೇ ಸಾಲಿನ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಪ್ರತಿಭಾವನ್ವಿತ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಕ್ರೀಡಾಪಟುಗಳು ನಿಗದಿತ ನಮೂನೆಯಲ್ಲಿ ವಿವರಗಳನ್ನು ಭರ್ತಿ ಮಾಡಿ, ಸಂಬಂಧಿಸಿದ ದಾಖಲೆಗಳನ್ನು ನವೆಂಬರ್ 27 ರೊಳಗೆ ಕಛೇರಿ ವೇಳೆಯಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ನಗರ ಜಿಲ್ಲೆ ಗೇಟ್ ನಂ.12, ಕೊಠಡಿ ಸಂಖ್ಯೆ 17-18, ಶ್ರೀ ಕಂಠೀರವ ಕ್ರೀಡಾಂಗಣ, ಕಸ್ತೂರ ಬಾ ರಸ್ತೆ, ಬೆಂಗಳೂರು-560001 ಇಲ್ಲಿ ಖುದ್ದಾಗಿ ಅರ್ಜಿಗಳನ್ನು ಸಲ್ಲಿಸಬಹುದು ಮತ್ತು ದೂ.ಸಂ. 080-22239771, 9480886470 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular