‘ಮೌಲಾನಾ ಆಜಾದ್’ ಮಾದರಿ ಶಾಲೆಯಲ್ಲಿ ಪ್ರಥಮ PUC ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : 2024-25ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಸೋಮಿನಕೊಪ್ಪ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿನ ಪದವಿ ಪೂರ್ವ ಶಿಕ್ಷಣ ಪಿ.ಸಿ.ಎಂ.ಬಿ. ವಿಭಾಗದ ಪ್ರಥಮ ಪಿ.ಯು.ಸಿ. ತರಗತಿಗೆ ಪ್ರವೇಶ ಪಡೆಯಲು ಎಸ್.ಎಸ್.ಎಲ್.ಸಿ. ಉತ್ತೀರ್ಣರಾದ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ಹಾಗೂ ಪ.ಜಾ./ಪ.ಪಂ. ಹಾಗೂ ಇತರೆ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿದ ಅರ್ಹವಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪೋಷಕರು/ ವಿದ್ಯಾರ್ಥಿಗಳು ಎಲ್ಲಾ ದಾಖಲೆಗಳೊಂದಿಗೆ ನಗರದ ಸೋಮಿನಕೊಪ್ಪ ಮೌಲಾನಾ ಆಜಾದ್ ಮಾದರಿ ಶಾಲೆಯ ಕಾಲೇಜು ವಿಭಾಗದಲ್ಲಿ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಆ.16 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 1ನೇ ಮಹಡಿ, ಸತ್ಯಶ್ರೀ ಆರ್ಕೆಡ್, 5ನೇ ಪ್ಯಾರಲಲ್ ರಸ್ತೆ, ದುರ್ಗಿಗುಡಿ, ದೂ. ಸಂ. : 08182-220206 ಹಾಗೂ ಪ್ರಾಂಶುಪಾಲರು, ಮೌಲಾನಾ ಆಜಾದ್ ಮಾದರಿ ಶಾಲೆಯ ಕಾಲೇಜು ವಿಭಾಗ ಸೋಮಿನಕೊಪ್ಪ ದೂ.ಸಂ.:8971630605 ಇವರನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read