HomeKarnatakaವಿದ್ಯಾರ್ಥಿಗಳೇ ಗಮನಿಸಿ: ಮೊರಾರ್ಜಿ ದೇಸಾಯಿ ವಸತಿ ಪ.ಪೂ. ಕಾಲೇಜುಗಳಲ್ಲಿ ಪ್ರಥಮ ಪಿಯು ಪ್ರವೇಶಾವಕಾಶಕ್ಕೆ ಅರ್ಜಿ ಆಹ್ವಾನ

ವಿದ್ಯಾರ್ಥಿಗಳೇ ಗಮನಿಸಿ: ಮೊರಾರ್ಜಿ ದೇಸಾಯಿ ವಸತಿ ಪ.ಪೂ. ಕಾಲೇಜುಗಳಲ್ಲಿ ಪ್ರಥಮ ಪಿಯು ಪ್ರವೇಶಾವಕಾಶಕ್ಕೆ ಅರ್ಜಿ ಆಹ್ವಾನ

ಹಾವೇರಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜುಗಳಲ್ಲಿ 2024-25 ನೇ ಸಾಲಿನ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಥಮ ಪಿಯುಸಿ ತರಗತಿಯ ಪಿಸಿಎಂಬಿ ಹಾಗೂ ಪಿಸಿಎಂಸಿ ಸಂಯೋಜನೆಗಳಿಗೆ ವಿದ್ಯಾರ್ಥಿಗಳನ್ನು ಮೆರಿಟ್ ಹಾಗೂ ವರ್ಗ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಯಾವುದೇ ವಸತಿ ಶಾಲೆಯ ವಿದ್ಯಾರ್ಥಿಗಳು 2023-24 ನೇ ಶೈಕ್ಷಣಿಕ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ವ್ಯಾಸಂಗ ಮಾಡಿ ಉತ್ತೀರ್ಣರಾದವರು ಹತ್ತಿರದ ಯಾವುದೇ ಮೊರಾರ್ಜಿ ದೇಸಾಯಿ, ಕಿತ್ತೂರ ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಅಟಲ್ ಬಿಹಾರಿ ಬಾಜಪೇಯಿ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ದಾಖಲಾತಿಗೆ ದಿನಾಂಕ 17-05-2024 ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಹಾಗೂ ಹಿಂದುಳಿದ ವರ್ಗದ ಪ್ರ. ವರ್ಗ-1ರ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ರೂ.2.50 ಲಕ್ಷದೊಳಗಿರಬೇಕು. ಹಿಂದುಳಿದ ವರ್ಗದ 2ಎ, 2ಬಿ, 3ಎ ಮತ್ತು 3ಬಿ ಗುಂಪಿಗೆ ಸೇರಿದ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ರೂ.ಒಂದು ಲಕ್ಷದೊಳಗಿರಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ಸವಣೂರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜಿನ ಪ್ರಾಂಶುಪಾಲರು ಹಾಗೂ ಜಿಲ್ಲಾ ಸಮನ್ವಯಾಧಿಕಾರಿ ಶ್ರೀಮತಿ ಗುರುಬಸಮ್ಮ(9916559613), ಹಾನಗಲ್ ತಾಲೂಕು ಹಳ್ಳಿಬೈಲ್ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜ್(ಉನ್ನತೀಕರಿಸಿದ) ಪ್ರಾಂಶುಪಾಲ ಎಸ್.ಚವಟಿ ಹಾಗೂ ಶಿಗ್ಗಾಂವ ತಾಲೂಕು ಬಾಡ ಅಟಲ ಬಿಹಾರಿ ವಾಜಪೇಯಿ ವಸತಿ ಶಾಲೆ ಮತ್ತು ಕಾಲೇಜಿನ ಮೃತ್ಯುಂಜಯ ಮಠದ(9611017096) ಅವರನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಸಮನ್ವಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular