HomeLatest Newsಉಚಿತ 'CCTV' ಅಳವಡಿಕೆ, ಸರ್ವೀಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

ಉಚಿತ ‘CCTV’ ಅಳವಡಿಕೆ, ಸರ್ವೀಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಸೆ. 08 ರಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಉಚಿತ ಸಿಸಿ ಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿ ಶಿಬಿರವನ್ನು ಏರ್ಪಡಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದ್ದು, ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳಿಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

ಆಸಕ್ತಿಯುಳ್ಳ ಅಭ್ಯರ್ಥಿಗಳು ಸೆ. 08 ರ ಸೋಮವಾರ ಬೆಳಗ್ಗೆ 9.00 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬಹುದೆಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯನ್ನು ಈ ಕೆಳಕಂಡ ದೂ. ಸಂ. 8970476050, 9591514154, 9686248369, 8970446644, 9505894247 ಗಳಿಗೆ ಸಂಪರ್ಕಿಸುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular