ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಉಚಿತ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಉಚಿತ ವಿದ್ಯಾರ್ಥಿ ನಿಲಯ  ಪ್ರವೇಶಕ್ಕೆ  ನಗರದಲ್ಲಿ ವ್ಯಾಸಂಗ ಮಾಡುತ್ತಿರುವ ವೀರಶೈವ ಸಮಾಜದಲ್ಲಿರುವ ಪ್ರತಿಭಾವಂತ ಹಾಗೂ ಬಡ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಶಿವಮೊಗ್ಗ ಜಿಲ್ಲಾ ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಶ್ರೀ ಗುಬ್ಬಿ ತೋಟದಪ್ಪನವರ ಧರ್ಮಸಂಸ್ಥೆ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ನಡೆಸುತ್ತಿರುವ ನಗರದ ನವುಲೆ, ಡಾಲರ್ಸ್ ಕಾಲೋನಿಯಲ್ಲಿರುವ ಉಚಿತ ವಿದ್ಯಾರ್ಥಿನಿಲಯಕ್ಕೆ ನಗರದಲ್ಲಿ ವ್ಯಾಸಂಗ ಮಾಡುತ್ತಿರುವ ವೀರಶೈವ ಸಮಾಜದಲ್ಲಿರುವ ಪ್ರತಿಭಾವಂತ ಹಾಗೂ ಬಡ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

2023-24ನೇ ಶೈಕ್ಷಣಿಕ ಸಾಲಿನ ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಜೂ.20ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸಂಘದ ಪ್ರಧಾನ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 9916278470/ 9448231968 ಗಳನ್ನು ಸಂಪರ್ಕಿಸುವುದು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read