ಗಮನಿಸಿ : ಗೃಹರಕ್ಷಕ ದಳ ಸದಸ್ಯತ್ವ ನೋಂದಣಿಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಜಿಲ್ಲಾ ಗೃಹ ರಕ್ಷಕ ದಳ, ಬೆಂಗಳೂರು ದಕ್ಷಿಣ ಜಿಲ್ಲೆ ವತಿಯಿಂದ ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿ ಇರುವ ಗೃಹರಕ್ಷಕ ಸ್ವಯಂ ಸೇವಾ ಸದಸ್ಯರ ಸ್ಥಾನಗಳನ್ನು ಭರ್ತಿ ಮಾಡಲು ಬೆಂಗಳೂರು ನಗರದ ಸ್ಥಳೀಯ ಆಸಕ್ತ ನಾಗರಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು, 19 ರಿಂದ 45 ವರ್ಷಗಳ ವಯೋಮಿತಿ ಒಳಗಿರಬೇಕು, ಉತ್ತಮ ಆರೋಗ್ಯ ಮತ್ತು ದೇಹದಾರ್ಢ್ಯತೆ ಹೊಂದಿರಬೇಕು, ಬೆಂಗಳೂರು ದಕ್ಷಿಣ ಜಿಲ್ಲಾ ಕಛೇರಿಯ ವ್ಯಾಪ್ತಿಗೆ ಒಳಪಡುವ ವಿಳಾಸದಲ್ಲಿ ವಾಸವಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಆಸಕ್ತರು ಅರ್ಜಿ ನಮೂನೆಗಳನ್ನು ಸಮಾದೇಷ್ಟರವರ ಕಚೇರಿ, ಗೃಹರಕ್ಷಕ ದಳ, ಬೆಂಗಳೂರು ದಕ್ಷಿಣ ಜಿಲ್ಲೆ, ಶೇಷಾದ್ರಿ ರಸ್ತೆ, ಫ್ರೀಡಂ ಪಾರ್ಕ್ ಹತ್ತಿರ, ಬೆಂಗಳೂರು ಇಲ್ಲಿ ಪಡೆಯಬಹುದು. ಅರ್ಜಿಗಳನ್ನು ಡಿಸೆಂಬರ್ 20 ರವರೆಗೆ ಉಚಿತವಾಗಿ ವಿತರಿಸಲಾಗುವುದು. ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಆಧಾರ್ ಕಾರ್ಡ್ / ಚುನಾವಣಾ ಗುರುತಿನ ಚೀಟಿ/ ಇತ್ತೀಚಿನ ಗ್ಯಾಸ್ ರಸೀದಿ-ಮೂಲ ಪ್ರತಿಗಳನ್ನು ಹಾಜರುಪಡಿಸಿ ಅರ್ಜಿ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ಸಮಾದೇಷ್ಟರವರ ಕಚೇರಿ, ಗೃಹರಕ್ಷಕ ದಳ, ಬೆಂಗಳೂರು ದಕ್ಷಿಣ ಜಿಲ್ಲೆ, ಶೇಷಾದ್ರಿ ರಸ್ತೆ, ಫ್ರೀಡಂ ಪಾರ್ಕ್ ಹತ್ತಿರ, ಬೆಂಗಳೂರು ಅಥವಾ ದೂರವಾಣಿ ಸಂಖ್ಯೆ: 080-22261012 ಅನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಹೋಮ್ ಗಾರ್ಡ್ ಕಮಾಂಡೆಂಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read