HomeKarnatakaಕ್ರೀಡಾಪಟುಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : 2021 ಮತ್ತು 2022 ನೇ ಸಾಲಿನಲ್ಲಿ ರಾಷ್ಟ್ರ ಮತ್ತು ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ರಾಜ್ಯದ ಕ್ರೀಡಾಪಟುಗಳಿಗೆ ನಗದು ಪ್ರೋತ್ಸಾಹಧನ ನೀಡಲಾಗುತ್ತಿದೆ.

ಒಲಂಪಿಕ್ಸ್ ಗೇಮ್ಸ್, ಕಾಮನ್ ವೆಲ್ತ್ ಗೇಮ್ಸ್ ಮತ್ತು ಏಷ್ಯನ್ ಗೇಮ್ಸ್ ಕ್ರೀಡಾಕೂಟ ಹೊರತುಪಡಿಸಿ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ಕೊಡಗು ಜಿಲ್ಲೆಯ ಆಸಕ್ತ ಕ್ರೀಡಾಪಟುಗಳು ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಮಡಿಕೇರಿ ಇಲ್ಲಿ ಪಡೆದು ನವೆಂಬರ್, 18 ರೊಳಗೆ ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂ.ಸಂ. 08272-220986 ಮತ್ತು 7975381728 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular