ಗಮನಿಸಿ : ಪರಿಶಿಷ್ಟ ಪಂಗಡ ಇಲಾಖೆಯಿಂದ ‘ಕಾನೂನು ವೃತ್ತಿ’ ತರಬೇತಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಪ್ರಸ್ತಕ ಸಾಲಿನಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಕಾನೂನು ವೃತ್ತಿ ತರಬೇತಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ ಅವರು ತಿಳಿಸಿದ್ದಾರೆ.
ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ 2024-25 ನೇ ಸಾಲಿನ ಆಡಳಿತ ನ್ಯಾಯಾಧೀಕರಣದಲ್ಲಿ ಎರಡು ವರ್ಗಗಳ ವೃತ್ತಿ ತರಬೇತಿಯಲ್ಲಿ ಶಿಷ್ಯವೇತನ ನೀಡಲಾಗುತ್ತದೆ.ಅರ್ಹ ಪದವೀಧರರು ಜೂನ್ 30ರ ಒಳಗಾಗಿ ಇಲಾಖೆಯ ವೆಬ್ಸೈಟ್ www.tw.kar.nic.in ಗೆ ಭೇಟಿ ನೀಡಿ ಅರ್ಜಿಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ನಲ್ಲಚೆರವು ಪ್ರದೇಶದಲ್ಲಿನ ವಾಲ್ಮೀಕಿ ಭವನದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read