ಬಳ್ಳಾರಿ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ನಗರದ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2023-24 ನೇ ಸಾಲಿಗೆ 6 ರಿಂದ 9ನೇ ತರಗತಿವರೆಗೆ ಖಾಲಿ ಉಳಿದರುವ ಸೀಟುಗಳಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತಿಯುಳ್ಳ ವಿದ್ಯಾರ್ಥಿಗಳು ಹಾಗೂ ಪಾಲಕರು ಅರ್ಜಿಗಳನ್ನು ಹತ್ತಿರದ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಉಚಿತವಾಗಿ ಪಡೆಯಬಹುದು.ಹೆಚ್ಚಿನ ಮಾಹಿತಿಗಾಗಿ ತಾಲೂಕು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮಾಹಿತಿ ಕೇಂದ್ರಗಳಾದ ಬಳ್ಳಾರಿ ಮೊ.8310321101, ಸಂಡೂರು ಮೊ.9036925966,8660575061, ಸಿರುಗುಪ್ಪ ಮೊ.9148889975 ಗೆ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಬೆಳಗಲ್ಲು ರಸ್ತೆಯ ‘ಜಿ’ ಸ್ಕ್ವಾಯರ್ ಸಿಟಿ ಹಿಂದುಗಡೆಯ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಾರ್ಯಾಲಯದ ದೂ.08392-200125/224, ಮೊ.8861623814 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣಾಧಿಕಾರಿ ಎಸ್.ಅಂಜಿನಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.