HomeKarnataka'ಮ್ಯಾನುವೆಲ್ ಸ್ಕಾವೆಂಜರ್ಸ್' ಅಧಿಕಾರೇತರ ಸದಸ್ಯತ್ವ ಸ್ಥಾನಕ್ಕೆ ಅರ್ಜಿ ಆಹ್ವಾನ

‘ಮ್ಯಾನುವೆಲ್ ಸ್ಕಾವೆಂಜರ್ಸ್’ ಅಧಿಕಾರೇತರ ಸದಸ್ಯತ್ವ ಸ್ಥಾನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರು ಉತ್ತರ ತಾಲ್ಲೂಕು, ಯಲಹಂಕ ತಾಲ್ಲೂಕು ಹಾಗೂ ಪೂರ್ವ ತಾಲ್ಲೂಕುಗಳ ಮ್ಯಾನುವೆಲ್ ಸ್ಕಾವೆಂಜರ್ಸ್ ವೃತ್ತಿಯಲ್ಲಿ ತೊಡಗಿರುವ ಸಮೂದಾಯದವರ ಏಳಿಗೆಗಾಗಿ ಅಥವಾ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸಮೂದಾಯದವರಾದ ಸ್ಥಳೀಯರು ಬೆಂಗಳೂರು ಉತ್ತರ ಉಪ ವಿಭಾಗ ಮಟ್ಟದ ಮ್ಯಾನುವೆಲ್ ಸ್ಕಾವೆಂಜರ್ಸ್ ಅಧಿಕಾರೇತರ ಸದಸ್ಯತ್ವ ಸ್ಥಾನಕ್ಕೆ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಉತ್ತರ ತಾಲ್ಲೂಕು, ಎನ್.ಇ.ಎಸ್. ಪ್ರಥಮ ದರ್ಜೆ ಕಾಲೇಜು ಪಕ್ಕ ಯಲಹಂಕ, ಬೆಂಗಳೂರು -560 064 ಇಲ್ಲಿ ಡಿಸೆಂಬರ್ 21 ರೊಳಗಾಗಿ ಕಚೇರಿಯ ವೇಳೆಯಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-28461315 ಅಥವಾ ಇ-ಮೇಲ್ [email protected] ಅನ್ನು ನೋಡಬಹುದಾಗಿದೆ ಎಂದು ಬೆಂಗಳೂರು ಉತ್ತರ ಉಪ ವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಬೆಂಗಳೂರು ಉತ್ತರ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular