HomeKarnatakaವಿದ್ಯಾರ್ಥಿಗಳ ಗಮನಕ್ಕೆ : ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ವಿದ್ಯಾರ್ಥಿಗಳ ಗಮನಕ್ಕೆ : ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕು ವ್ಯಾಪ್ತಿಯಲ್ಲಿರುವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ https://ssp.postmatric.karnataka.gov.in ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು ಹಾಗೂ ವಿದ್ಯಾರ್ಥಿಗಳು ಖಡ್ಡಾಯವಾಗಿ ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಜೋಡಣೆ ಮಾಡಿಕೊಂಡು ಮಾಡಿಕೊಂಡಿರಬೇಕು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಬನಶಂಕರಿ, ಬೆಂಗಳೂರು ಅಥವಾ ವೆಬ್ ಸೈಟ್ :https://ssp.postmatric.karnataka.gov.in ಅಥವಾ ದೂರವಾಣಿ ಸಂಖ್ಯೆ: 080-26711096 ಮೂಲಕ ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular