ಮೆಟ್ರಿಕ್ ಪೂರ್ವ/ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ತಾಲೂಕು ಸಮಾಜ ಕಲ್ಯಾಣ ಇಲಾಖೆಯು 2024-25 ಸಾಲಿನಲ್ಲಿ ಮೆಟ್ರಿಕ್ ಪೂರ್ವ/ ನಂತರದ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರವೇಶ ಬಯಸುವ ವಿದ್ಯಾರ್ಥಿಗಳು ಕಳೆದ ಸಾಲಿನ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, SATS ID/ SSP ID/ ಯುನಿರ್ವಸಿಟಿ ಐಡಿ ನಂಬರ್ ಈ ಎಲ್ಲಾ ದಾಖಲೆಗಳೊಂದಿಗೆ ತಾಲೂಕಿನ ಆಯಾ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಕಚೇರಿಯನ್ನು ಖುದ್ದಾಗಿ ಅಥವಾ WWW.SWD.KAR.NIC.IN ಅಥವಾ ಮೊ.ಸಂ.: 9480843192 ನ್ನು ಸಂಪರ್ಕಿಸುವುದು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read