ಪ್ರಗತಿಪರ ರೈತ/ರೈತ ಮಹಿಳೆ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 2023ರ ಅಕ್ಟೋಬರ್ ತಿಂಗಳಿನಲ್ಲಿ ನಡೆಯುವ ಕೃಷಿ ಮತ್ತು ತೋಟಗಾರಿಕೆ ಮೇಳಕ್ಕೆ ಪ್ರಗತಿಪರ ರೈತ/ರೈತ ಮಹಿಳೆ ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಸಮಗ್ರ ಕೃಷಿಯನ್ನು ಅಳವಡಿಸಿಕೊಂಡು ಪ್ರಗತಿಯತ್ತ ಸಾಗುತ್ತಿರುವ ರೈತ ಹಾಗೂ ರೈತ ಮಹಿಳೆಯರನ್ನು ನಮ್ಮ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ಪ್ರತಿ ಜಿಲ್ಲೆಗೆ ಒಬ್ಬರಂತೆ ಗುರುತಿಸಲಾಗುವುದು. ಅರ್ಜಿಗಳನ್ನು ಶಿವಮೊಗ್ಗ ಕೃಷಿ ವಿಜ್ಞಾನ ಕೇಂದ್ರ ಹಾಗೂ ಶಿವಮೊಗ್ಗ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಪಡೆದುಕೊಂಡು ಸೆ.30 ರೊಳಗೆ ಕೃಷಿ ವಿಜ್ಞಾನ ಕೇಂದ್ರ ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ನೀಡಬೇಕು.

ಹೆಚ್ಚಿನ ಮಾಹಿತಿಗಾಗಿ ನವುಲೆ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರ ದೂರವಾಣಿ ಸಂಖ್ಯೆ : 9480838976, shimogakvk@gmail.com, ayhugar@yahoo.com ಹಾಗೂ ಶಿವಮೊಗ್ಗ ಜಂಟಿ ಕೃಷಿ ನಿರ್ದೇಶಕರ ಮೊ.ನಂ : 8277932600, dagrshi@yahoo.co.in ನ್ನು ಸಂಪರ್ಕಿಸಬಹುದಾಗಿದೆ. ಅರ್ಜಿ ಫಾರಂನ್ನು www.uahs.edu.in ಮೂಲಕ ಪಡೆಯಬಹುದಾಗಿದೆ ಎಂದು ಶಿವಮೊಗ್ಗ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿಗಳು ಮತ್ತು ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read