
ಸಮಗ್ರ ಕೃಷಿಯನ್ನು ಅಳವಡಿಸಿಕೊಂಡು ಪ್ರಗತಿಯತ್ತ ಸಾಗುತ್ತಿರುವ ರೈತ ಹಾಗೂ ರೈತ ಮಹಿಳೆಯರನ್ನು ನಮ್ಮ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ಪ್ರತಿ ಜಿಲ್ಲೆಗೆ ಒಬ್ಬರಂತೆ ಗುರುತಿಸಲಾಗುವುದು. ಅರ್ಜಿಗಳನ್ನು ಶಿವಮೊಗ್ಗ ಕೃಷಿ ವಿಜ್ಞಾನ ಕೇಂದ್ರ ಹಾಗೂ ಶಿವಮೊಗ್ಗ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಪಡೆದುಕೊಂಡು ಸೆ.30 ರೊಳಗೆ ಕೃಷಿ ವಿಜ್ಞಾನ ಕೇಂದ್ರ ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ನೀಡಬೇಕು.
ಹೆಚ್ಚಿನ ಮಾಹಿತಿಗಾಗಿ ನವುಲೆ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರ ದೂರವಾಣಿ ಸಂಖ್ಯೆ : 9480838976, [email protected], [email protected] ಹಾಗೂ ಶಿವಮೊಗ್ಗ ಜಂಟಿ ಕೃಷಿ ನಿರ್ದೇಶಕರ ಮೊ.ನಂ : 8277932600, [email protected] ನ್ನು ಸಂಪರ್ಕಿಸಬಹುದಾಗಿದೆ. ಅರ್ಜಿ ಫಾರಂನ್ನು www.uahs.edu.in ಮೂಲಕ ಪಡೆಯಬಹುದಾಗಿದೆ ಎಂದು ಶಿವಮೊಗ್ಗ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿಗಳು ಮತ್ತು ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

