ಗಮನಿಸಿ : PSI/ ಪ್ಯಾರಾ ಮಿಲಿಟರಿ ಪೂರ್ವ ನೇಮಕಾತಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ..

2024-25ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಸಬ್ ಇನ್ಸೆಕ್ಟರ್ (PSI)/ಪ್ಯಾರ ಮಿಲಿಟರಿ ಪೂರ್ವ-ನೇಮಕಾತಿ ತರಬೇತಿ ನೀಡಲಾಗುತ್ತಿದ್ದು, ರಾಜ್ಯದ 04 ಕಂದಾಯ ವಿಭಾಗಗಳಲ್ಲಿ ಪ್ರತ್ಯೇಕವಾಗಿ 75 ದಿನಗಳ ವಸತಿಯುತ ತರಬೇತಿ ನೀಡಲಾಗುತ್ತಿದೆ.

2024-25ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ವಸತಿಯುತ, ಸಬ್ ಇನ್ಸೆಕ್ಟರ್ (PSI)/ಪ್ಯಾರ ಮಿಲಿಟರಿ ಪೂರ್ವ-ನೇಮಕಾತಿ ತರಬೇತಿ ನೀಡಲು ಉದ್ದೇಶಿಸಲಾಗಿದೆ.

ವಸತಿಯುತ, ಸಬ್ ಇನ್ಸೆಕ್ಟರ್ (PSI)/ಪಾರ ಮಿಲಿಟರಿ ಪೂರ್ವ-ನೇಮಕಾತಿ ತರಬೇತಿಯ ಅವಧಿ, ಶೈಕ್ಷಣಿಕ ವಿದ್ಯಾರ್ಹತೆ, ಅರ್ಜಿಸಲ್ಲಿಸಬೇಕಾದ ವೆಬ್ ಸೈಟ್ ವಿಳಾಸ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ವಿವರಗಳು ಈ ಕೆಳಕಂಡಂತಿದೆ.

01.ಸಬ್ ಇನ್ಸೆಕ್ಟರ್ (PSI)/ಪ್ಯಾರ ಮಿಲಿಟರಿ ಪೂರ್ವ- ನೇಮಕಾತಿ ತರಬೇತಿ
ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ವಸತಿಯುತ, ಸಬ್ ಇನ್ಸೆಕ್ಟರ್ (PSI)/ಪ್ಯಾರ ಮಿಲಿಟರಿ ಪೂರ್ವ-ನೇಮಕಾತಿ ತರಬೇತಿ ನೀಡುವ ಸಂಬಂಧ ಕರ್ನಾಟಕ ರಾಜ್ಯದ 04 ಕಂದಾಯ ವಿಭಾಗಗಳಲ್ಲಿ ಪ್ರತ್ಯೇಕವಾಗಿ 75 ದಿನಗಳ ವಸತಿಯುತ ತರಬೇತಿ ನೀಡಲಾಗುವುದು.

ವಯಸ್ಸು

ಕನಿಷ್ಠ 21 ವರ್ಷ, ಗರಿಷ್ಠ 32 ವರ್ಷ ಸೇವಾನಿರತವಾಗಿರುವ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ

ವಿದ್ಯಾರ್ಹತೆ

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಯು.ಜಿ.ಸಿ ಇಂದ ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ (Degree) ಅಥವಾ ತತ್ಸಮಾನ (ಪಿಯುಸಿ ನಂತರ ಪದವಿಗೆ ಸಮನಾದ ಯಾವುದೇ ವಿದ್ಯಾರ್ಹತೆ) ಶಿಕ್ಷಣ ಪಾಸ್ ಮಾಡಿರಬೇಕು.

04.ಸೇವಾನಿರತ ಅಭ್ಯರ್ಥಿಗಳಿಗೆ ಅನುಭವ
ಪೊಲೀಸ್ ಇಲಾಖೆಯ ಯಾವುದೇ ವೃಂದದಲ್ಲಿ ಕನಿಷ್ಠ 5 ವರ್ಷ ಸೇವೆ ಸಲ್ಲಿಸಿರಬೇಕು.

ಅಭ್ಯರ್ಥಿಯ ಸಾಮಾನ್ಯ ಅರ್ಹತೆ

1. ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು
2. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ನಿಗಧಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.
3.ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
ಗಮನದಲಿಡಬೇಕಾದ ಅಂಶ :-
ಇಲಾಖಾ ವೆಬ್ ಸೈಟ್ ನಲ್ಲಿ ಕಾಲಕಾಲಕ್ಕೆ ನೀಡಲಾಗುವ ಮಾಹಿತಿಯು ಅಧಿಕೃತ ಹಾಗೂ ಅಂತಿಮವಾಗಿರುತ್ತದೆ.
ಇಲಾಖಾವತಿಯಿಂದ ಯಾವುದೇ ಪತ್ರ ವ್ಯವಹಾರವನ್ನು ನಡೆಸಲಾಗುವುದಿಲ್ಲವಾದ್ದರಿಂದ, ಇಲಾಖಾ ವೆಬ್ ಸೈಟ್ ನ್ನು ಕಾಲಕಾಲಕ್ಕೆ ವೀಕ್ಷಿಸತಕ್ಕದ್ದು.
ತಪ್ಪು ಮಾಹಿತಿಯ ಕಾರಣದಿಂದ ಊಂಟಾಗಬಹುದಾದ ಲೋಪಗಳಿಗೆ ಸಂಬಂಧಪಟ್ಟ ಅಭ್ಯರ್ಥಿಗಳೇ ಜವಾಬ್ದಾರರಾಗಿರುತ್ತಾರೆ.

.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read