ಧಾರವಾಡ ಜಿಲ್ಲೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆ, ಕಾಲೇಜುಗಳಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರು, ಉಪನ್ಯಾಸಕರ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಜೂನ್ 04, 2025 ರೋಳಗಾಗಿ, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಛೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮಾ, ಡಾ.ಬಿ.ಆರ್.ಅಂಬೇಡ್ಕರ, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ ಅಥವಾ ಜಂಟಿ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ: 0836-2447201 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
You Might Also Like
TAGGED:ಅತಿಥಿ ಶಿಕ್ಷಕರು