HomeKarnatakaJOB ALERT : ತಜ್ಞ ವೈದ್ಯರ ತಾತ್ಕಾಲಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

JOB ALERT : ತಜ್ಞ ವೈದ್ಯರ ತಾತ್ಕಾಲಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತನ್ನ ಅಧೀನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ತಜ್ಞ ವೈದ್ಯರ ಹುದ್ದೆಗಳಿಗೆ ತಾತ್ಕಾಲಿಕ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ನೇಮಕ ಮಾಡಲು ಅರ್ಹ ಎಂ.ಬಿ.ಬಿ.ಎಸ್. ಪದವೀಧರ ಮತ್ತು ತಜ್ಞ ವೈದ್ಯರಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಪ್ರತಿದಿನ ಕಚೇರಿ ಸಮಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಬಿ.ಹೆಚ್.ರಸ್ತೆ ಇಲ್ಲಿಗೆ ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ, ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳ ಒಂದು ಸೆಟ್ ನಕಲು ಮತ್ತು ಮೂಲ ಪ್ರತಿಗಳು ಹಾಗೂ ಇತ್ತೀಚಿನ ಒಂದು ಭಾವಚಿತ್ರಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ.ಸಂ.: 08182-222382 ನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular