
ನಿಗದಿತ ನಮೂನೆ ಅರ್ಜಿಗಳನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಯಿಂದ ಶುಲ್ಕ ರಹಿತವಾಗಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು 1ನೇ ತರಗತಿಯಿಂದ ಅಂತಿಮ ಪದವಿ/ ಡಿಪ್ಲೋಮಾವರೆಗೆ ವ್ಯಾಸಂಗ ಮಾಡುತ್ತಿರುವವರು ಸೆಪ್ಟಂಬರ್ 30ರೊಳಗಾಗಿ ಹಾಗೂ ವೃತ್ತಿಪರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವವರು ಅಕ್ಟೋಬರ್ 30 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಛೇರಿಯ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.

