HomeKarnataka'ಅಂಚೆ ಚೀಟಿ' ಸಂಗ್ರಹಿಸುವ ಹವ್ಯಾಸವುಳ್ಳ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; 'ದೀನ್ ದಯಾಳ್ ಸ್ಪರ್ಶ್' ಯೋಜನೆಯಡಿ ವಿದ್ಯಾರ್ಥಿ...

‘ಅಂಚೆ ಚೀಟಿ’ ಸಂಗ್ರಹಿಸುವ ಹವ್ಯಾಸವುಳ್ಳ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ‘ದೀನ್ ದಯಾಳ್ ಸ್ಪರ್ಶ್’ ಯೋಜನೆಯಡಿ ವಿದ್ಯಾರ್ಥಿ ವೇತನ

ಭಾರತೀಯ ಅಂಚೆ ಇಲಾಖೆಯು ದೀನ್ ದಯಾಳ್ ಸ್ಪರ್ಶ್ ಯೋಜನೆಯಡಿಯಲ್ಲಿ 2023-24ರ ಶೈಕ್ಷಣಿಕ ವರ್ಷದಲ್ಲಿ 60% ಅಂಕಗಳನ್ನು ಹೊಂದಿರುವ 6 ರಿಂದ 9 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನಿಸಿದೆ.

ಈ ಯೋಜನೆಯು ಅಂಚೆ ಚೀಟಿ ಸಂಗ್ರಹಣೆಯಲ್ಲಿ ಆಸಕ್ತಿ ಮತ್ತು ಅಭಿರುಚಿ ಬೆಳಸಿಕೊಂಡು ತಮ್ಮ ಹವ್ಯಾಸವನ್ನಾಗಿ ಅಳವಡಿಸಿಕೊಳ್ಳಲು ಪ್ರೋತ್ಸಾಹಿಸುವ ಉದ್ದೇಶ ಹೊಂದಿದ್ದು, ಆಯ್ಕೆಯಾದ ವಿದ್ಯಾರ್ಥಿಗಳು ವರ್ಷಕ್ಕೆ ರೂ.6000/-ಗಳ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ.

ಮೊದಲ ಹಂತದ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಅಂಚೆ ಇಲಾಖೆಯ ನೀಡುವ ಅಂಚೆ ಚೀಟಿಗಳ ಸಂಗ್ರಹ ಪ್ರಾಜೆಕ್ಟ್ ನಲ್ಲಿ ಯಶಸ್ವಿಯಾಗಿ ಸ್ಪರ್ಧಿಸಬೇಕಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಂಚೆ ಚೀಟಿ ಸಂಗ್ರಹದ ರಸಪ್ರಶ್ನೆಯಲ್ಲಿ ಭಾಗವಹಿಸಲು ಅರ್ಜಿಯನ್ನು ಸೆ. 03ರೊಳಗಾಗಿ ಖುದ್ದಾಗಿ/ಅಂಚೆ ಮೂಲಕ ಸಲ್ಲಿಸಬೇಕಾಗಿದೆ.

ಹೆಚ್ಚಿನ ಮಾಹಿತಿಗಾಗಿ www.indiapost.gov.in ಮತ್ತು www.karnatakapost.gov.in ಗೆ ಭೇಟಿ ನೀಡುವುದು.

For Latest News Updates, Join Our Whatsapp Community🚩
RELATED ARTICLES

Most Popular