HomeKarnatakaಕ್ರೀಡಾ ಇಲಾಖೆಯಿಂದ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ

ಕ್ರೀಡಾ ಇಲಾಖೆಯಿಂದ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಪ. ಜಾ. ಯುವಜನರ ಸ್ವಾವಲಂಬನೆಗೆ ಉತ್ತೇಜಿಸುವ ತರಬೇತಿಗಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ಜ.27 ರಿಂದ ಫೆ. 10ರವರೆಗೆ 15 ದಿನಗಳ ಜಿಮ್ ತರಬೇತಿ ಶಿಬಿರಕ್ಕಾಗಿ ದ್ವಿತೀಯ ಪಿಯುಸಿ (ಪಾಸ್/ಫೇಲ್) ವಿದ್ಯಾರ್ಹತೆಯುಳ್ಳ 18 ರಿಂದ 40 ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಯುವನಿಕ ಸಭಾಂಗಣದಲ್ಲಿ ನಡೆಯುವ ಫೆ.11 ರಿಂದ 18ರವರೆಗೆ 8 ದಿನಗಳ ನಿರುಪಣಾ ಮತ್ತು ವಾರ್ತಾ ವಾಚಕ ತರಬೇತಿ ಶಿಬಿರಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಹತೆಯುಳ್ಳ 18 ರಿಂದ 40 ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಕ್ರೀಡಾಂಗಣ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜ. 24ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಈ ತರಬೇತಿಯಲ್ಲಿ ಹಾಜರಾಗುವ ಅಭ್ಯರ್ಥಿಗಳಿಗೆ ಲಘು ಉಪಹಾರ ಹಾಗೂ ಹೊರ ಜಿಲ್ಲೆಗಳಿಂದ ಭಾಗವಹಿಸುವ ಶಿಭಿರಾರ್ಥಿಗಳಿಗೆ ಸಾಮಾನ್ಯ ವಸತಿ ವ್ಯವಸ್ಥೆಯನ್ನು ನೀಡಲಾಗುವುದು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular